ರಾಜಕೀಯ

ಇಂದು ಬಿಎಸ್ಸಾರ್‌ಗೆ ಮಳೆ ಹುಡುಗಿ ಎಂಟ್ರಿ

Published On :

ಬಳ್ಳಾರಿ: ನಟಿ ಪೂಜಾ ಗಾಂಧಿ ಭಾನುವಾರ ಬೆಳಗ್ಗೆ 9ಕ್ಕೆ ನಗರದ ಬಿ. ಶ್ರೀರಾಮುಲು ಸಮ್ಮುಖದಲ್ಲಿ ಬಿಎಸ್ಸಾರ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮುಖಂಡ ಸಂಜಯ್ ಬೇಟಗೇರಿ ತಿಳಿಸಿದರು.
ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂದರ್ಭದಲ್ಲಿ ಬಿಎಸ್ಸಾರ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಕ್ಷಿತಾ ಪ್ರೇಮ್, ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ, ಸಂಸದೆ ಜೆ. ಶಾಂತಾ, ಸಣ್ಣಫಕ್ಕೀರಪ್ಪ, ಕಂಪ್ಲಿ ಶಾಸಕ ಸುರೇಶ್‌ಬಾಬು, ಪಕ್ಷದ ಮುಖಂಡರಾದ ಎಸ್. ಗುರುಲಿಂಗನಗೌಡ, ಡಾ.ಎಸ್.ಜೆ.ವಿ. ಮಹಿಪಾಲ್ ಇತರರು ಭಾಗವಹಿಸಲಿದ್ದಾರೆ ಎಂದರು.
ಪೂಜಾಗಾಂಧಿ, ರಕ್ಷಿತಾ ಪ್ರಚಾರ: ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾ.3ರಂದು ಪೂಜಾ ಗಾಂಧಿ ಹಾಗೂ ರಕ್ಷಿತಾ ಮಹಾನಗರ ಪಾಲಿಕೆಯ ವಿವಿಧ ವಾರ್ಡ್‌ಗಳಲ್ಲಿ ಬಿಎಸ್ಸಾರ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ನಂತರ ಪೂಜಾ ಗಾಂಧಿ ಅವರು ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ, ಸಿರುಗುಪ್ಪ ಪುರಸಭೆಗಳಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.