ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆ ಕಡೆ ಗಮನಹರಿಸಿ

Published On :

ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲುವತ್ತ ಗಮನ ಹರಿಸುವಂತೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ.
ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆಗೆ ಆಗಮಿಸಿದ್ದ ಶೆಟ್ಟರ್ ರಾಜ್ಯ ಬಿಜೆಪಿ ವಿದ್ಯಮಾನಗಳ ಹಾಗೂ ಸ್ಥಳೀಯ ಸಂಸ್ಥೆ ಚುನಾವಣಾ ಪ್ರಚಾರ, ಸಂಘಟನೆ ಕುರಿತಂತೆ ಅನೌಪಚಾರಿಕವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ರಾಜ್ಯಸಭಾ ಪ್ರತಿಪಕ್ಷ ನಾಯಕ ಅರುಣ್ ಜೇಟ್ಲಿ ಅವರೊಂದಿಗೆ ಚರ್ಚಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲಬೇಕು. ನಂತರ ವಿಧಾನಸಭಾ ಚುನಾವಣೆ ಗೆಲ್ಲಲು ಸಿದ್ಧತೆ ನಡೆಸಬೇಕೆಂದು ಉಭಯ ನಾಯಕರು ಸೂಚಿಸಿದ್ದಾರೆ. ಉಭಯ ನಾಯಕರ ಅನುಮತಿ ಪಡೆದ ಶೆಟ್ಟರ್, ಶನಿವಾರವೇ ಬೆಂಗಳೂರಿಗೆ ಹಿಂದಿರುಗಿದರು. ಮೇ ಅಂತ್ಯದವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಹಾಗೂ ವಿವಾದಗಳಿಂದ ದೂರ ಉಳಿಯುವಂತೆ ಸೂಚಿಸಿದ್ದಾರೆನ್ನಲಾಗಿದೆ.
ರಾಜಕೀಯ ವಿದ್ಯಾಮಾನಗಳ ಚರ್ಚೆ ಇಲ್ಲ: ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಾನು ಶನಿವಾರವೇ ತೆರಳುತ್ತಿದ್ದೇನೆ ಎಂದರು. ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ನೂತನ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಶೆಟ್ಟರ್ ಅಭಿನಂದಿಸಿದರು.
ಶೆಟ್ಟರ್ ಅತ್ಯಲ್ಪ ಅವಧಿಯಲ್ಲೇ ಉತ್ತಮ ಕೆಲಸ ಮಾಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಕ್ಕೆ ರಾಷ್ಟ್ರೀಯ ಪ್ರಶಸ್ತಿಯನ್ನೂ ಪಡೆದಿದ್ದಾರೆ ಎಂದು ರಾಜನಾಥ್ ಸಿಂಗ್ ಶ್ಲಾಘಿಸಿದರು.
ಕರ್ನಾಟಕದಲ್ಲಿ ಇನ್ನೆರಡು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದೆ. ಬರುವ ಚುನಾವಣೆಯಲ್ಲೂ ಶೆಟ್ಟರ್ ನೇತೃತ್ವದಲ್ಲಿಯೇ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಹಾರೈಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.