ಕೆಜೆಪಿ, ಬಿಎಸ್ಆರ್ ಕಾಂಗ್ರೆಸ್ಗೆ ಮತ ನೀಡಿದರೆ ವ್ಯರ್ಥ: ಜೋಶಿ
ಬಹುಮತ ಪಡೆಯದ ಪಕ್ಷಗಳಿಗೆ ಮತದಾನ ಮಾಡುವುದು ವ್ಯರ್ಥ ಎಂಬುದು ಮತದಾರರಿಗೆ ಅರಿವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ...

ಮೈಸೂರು: ಬಹುಮತ ಪಡೆಯದ ಪಕ್ಷಗಳಿಗೆ ಮತದಾನ ಮಾಡುವುದು ವ್ಯರ್ಥ ಎಂಬುದು ಮತದಾರರಿಗೆ ಅರಿವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರು ಕೆಜೆಪಿ ಮತ್ತು ಬಿಎಸ್ಆರ್ ಕಾಂಗ್ರೆಸ್ಗೆ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ 'ಬಿಜೆಪಿ ವಿಜಯ ಸಂಕಲ್ಪ ಸಮಾವೇಶ'ಕ್ಕೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರೊಡನೆ ಆಗಮಿಸಿದ ಜೋಶಿ ಅವರು ಲಲಿತಮಹಲ್ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶೇ.2 ಅಥವಾ 3ರಷ್ಟು ಮತ ಪಡೆಯುವ ಪಕ್ಷಗಳನ್ನು ಬೆಂಬಲಿಸುವುದು ವ್ಯರ್ಥ. ಆದ್ದರಿಂದ ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ಮೊದಲನೆಯದು ಕಾಂಗ್ರೆಸ್ ಮತ್ತು ಎರಡನೆಯದು ಜೆಡಿಎಸ್ ಎದುರಾಳಿಗಳು. ಉಳಿದ ಪಕ್ಷಗಳ ಬಗ್ಗೆ ಪ್ರತಿಕ್ರಿಯೆ ಅಗತ್ಯ ಇಲ್ಲ ಎಂದರು.
ಕೆಜೆಪಿ ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 147 ವಿಧಾನಸಭಾ ಕ್ಷೇತ್ರಗಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ರಾಜಕೀಯ ಸ್ಥಿತ್ಯಂತರ ಇನ್ನು ಮುಂದೆ ನಡೆಯುವುದಿಲ್ಲ. ಇನ್ನೇನಿದ್ದರೂ ಯುದ್ಧ ಮಾತ್ರ. ರಾಜ್ಯದ ಕೆಲವು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದರು.
ಬಿಜೆಪಿಗೆ ಬಹುಮತ: ಶೆಟ್ಟರ್ ವಿಶ್ವಾಸ: ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಲಿದೆ. ಅಧ್ಯಕ್ಷರೊಂದಿಗೆ ಚರ್ಚಿಸಿ ಸದ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಉಪ ಮುಖ್ಯಮಂತ್ರಿ ಈಶ್ವರಪ್ಪ ಮಾತನಾಡಿ, ಜೋಶಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಪಕ್ಷಕ್ಕೆ ಆನೆ ಬಲ ಬಂದಿದೆ. ನೂತನ ಅಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಒಂದು ರಾಜಕೀಯ ಪಕ್ಷ ಎಂದ ಮೇಲೆ ಭಿನ್ನಮತ ಇದ್ದೇ ಇರುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


