ಶಂಕರಲಿಂಗೇಗೌಡರ ವಿರುದ್ಧ ಪುತ್ರ ಕಣಕ್ಕೆ?
ಮೈಸೂರು: ಮೈಸೂರು ಚಾಮರಾಜ ಕ್ಷೇತ್ರದಿಂದ ಹಾಲಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರ ವಿರುದ್ಧವೇ ಸ್ಪರ್ಧಿಸಲು ಪುತ್ರ ಎಚ್.ಎಸ್. ನಂದೀಶ್ ಪ್ರೀತಂ ಟಿಕೆಟ್ ಕೇಳುತ್ತಿದ್ದಾರೆ. ಶಂಕರಲಿಂಗೇಗೌಡರು ಈ ಕ್ಷೇತ್ರದಿಂದ 1994, 1999, 2004 ಮತ್ತು 2008- ಹೀಗೆ ನಾಲ್ಕು ಬಾರಿ ಬಿಜೆಪಿ ಟಿಕೆಟ್ ಮೇಲೆ ಆಯ್ಕೆಯಾಗಿದ್ದರು. ಇದೀಗ ಅವರು ಜೆಡಿಎಸ್ ಕಡೆ ವಾಲಿದ್ದು, ಈ ಬಾರಿ ಆ ಪಕ್ಷದ ಟಿಕೆಟ್ ಮೇಲೆ ಸ್ಪರ್ಧಿಸಲಿದ್ದಾರೆ. ನಂದೀಶ್ ಪ್ರೀತಂ ಇದೀಗ ಮೂರನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ತಂದೆ ಜೆಡಿಎಸ್ಗೆ ಹೋದರೂ ಅವರು ಬಿಜೆಪಿಯಲ್ಲೇ ಉಳಿದಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆ ಇದೆ. ತಂದೆಯನ್ನು ಮಣಿಸುತ್ತೇನೆ, ನನಗೆ ಟಿಕೆಟ್ ಕೊಡಿ ಎಂದು ಅವರು ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ. ಟಿಕೆಟ್ನ ಮತ್ತೋರ್ವ ಪ್ರಬಲ ಆಕಾಂಕ್ಷಿ, 3 ಬಾರಿ ಪಾಲಿಕೆ ಸದಸ್ಯರಾಗಿದ್ದ ಹಾಲಿ ಎಂಡಿಎ ಅಧ್ಯಕ್ಷ ಎಲ್. ನಾಗೇಂದ್ರ. ಬಹುತೇಕ ನಾಗೇಂದ್ರ ಅವರಿಗೆ ಟಿಕೆಟ್. ಹೀಗಾಗಿಯೇ ಅವರು ಈ ಬಾರಿ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲಿಲ್ಲ ಎಂದು ಹೇಳಲಾಗಿದೆ. ಆದರೆ ನಂದೀಶ್ ಪ್ರೀತಂಗೆ ಬಿಜೆಪಿ ಟಿಕೆಟ್ ಸಿಕ್ಕಲ್ಲಿ ಚಾಮರಾಜ ಕ್ಷೇತ್ರ ತಂದೆ- ಮಗನ ಹೋರಾಟದ ಕಣವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

