ಮಂಗಳೂರು: 'ಗೌಡ'ರಿಗೆ ಟಿಕೆಟ್ ಕೊಡಿ- ಸೇವಾ ಸಂಘ
ಕನ್ನಡಪ್ರಭ ವಾರ್ತೆ ಮಂಗಳೂರು ಮಾ.23
ದ.ಕ.ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಜಿಲ್ಲಾ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದೆ.
ಶನಿವಾರ ಸುದ್ದಿಗೋಷ್ಠಿ ನಡೆಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ಲೋಕಯ್ಯ ಗೌಡ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಗೌಡ ಸಮುದಾಯ ಪ್ರಬಲವಾಗಿದೆ. ಸುಳ್ಯದಲ್ಲಿ ಶೇ.65, ಪುತ್ತೂರಲ್ಲಿ ಶೇ.50, ಬೆಳ್ತಂಗಡಿಯಲ್ಲಿ ಶೇ.45 ಹಾಗೂ ಬಂಟ್ವಾಳದಲ್ಲಿ ಶೇ.15ರಷ್ಟು ಗೌಡ ಜನಾಂಗದ ಮತದಾರರಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ 3 ಲಕ್ಷ ಗೌಡ ಮತದಾರರಿದ್ದಾರೆ. ಸುಳ್ಯದಲ್ಲಿ ಗೌಡ ಜನಾಂಗದವರಿದ್ದರೂ ಅದು ಮೀಸಲು ಕ್ಷೇತ್ರ, ಅಲ್ಲಿ ಬೇರೆಯವರಿಗೆ ಅವಕಾಶ ಸಿಗುವುದಿಲ್ಲ. ಮುಖ್ಯವಾಗಿ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಪುತ್ತೂರು, ಬೆಳ್ತಂಗಡಿಯಲ್ಲಿ ಗೌಡ ಜನಾಂಗ ಅಭ್ಯರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ತಪ್ಪಿದಲ್ಲಿ ಮತದಾನ ಮೂಲಕವೇ ರಾಜಕೀಯ ಪಕ್ಷಗಳಿಗೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.
ಒಕ್ಕಲಿಗರ ಗೌಡ ಸೇವಾ ಸಂಘ ಪುತ್ತೂರು ಇದರ ಅಧ್ಯಕ್ಷ ಚಿದಾನಂದ ಬೈಲಾಡಿ, ಕಾರ್ಯದರ್ಶಿ ಕಿಶೋರ್ ಕುಮಾರ್ ನೆಲ್ಲಿಕಟ್ಟೆ, ಬಂಟ್ವಾಳ ಸಂಘ ಅಧ್ಯಕ್ಷ ಲಿಂಗಪ್ಪ ಗೌಡ, ಸುಳ್ಯ ಸಂಘ ಸಂಚಾಲಕ ಸತೀಶ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

