ಚುನಾವಣಾ ಪ್ರಚಾರಕ್ಕೆ ಅನುಮತಿ ಏಕಗವಾಕ್ಷಿ ಸಮಿತಿ ರಚನೆ
ಕ.ಪ್ರ. ವಾರ್ತೆ ಬೆಂಗಳೂರು ಮಾ.26-
ವಿಧಾನಸಭೆ ಚುನಾವಣೆ ಪ್ರಚಾರ ಸಭೆಗಳಿಗೆ ಅನುಮತಿ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ತಾಲೂಕು ಹಾಗೂ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ.
ಸಮಿತಿ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಮತಿಯ ಸಹ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಸಮಿತಿಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ, ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಇರಲಿದ್ದಾರೆ.
ತಾಲ್ಲೂಕು ಮಟ್ಟದಲ್ಲಿಯೂ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ.
ಇದಲ್ಲದೇ ಜಿಲ್ಲಾ ಮಾಧ್ಯಮ ಸಮಿತಿ, ಸಶಸ್ತ್ರ ಜಮಾ ಸಮಿತಿ ಹಾಗೂ ದೂರುಗಳ ಸಮಿತಿ ರಚಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ನೋಡಲ್ ಅಧಿಕಾರಿ ನೇಮಕ: ಅಭ್ಯರ್ಥಿಗಳ ವೆಚ್ಚಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯಲೆಕ್ಕಾಧಿಕಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ಲೆಕ್ಕಾಧಿಕಾರಿಯನ್ನು ನೇಮಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲೂ ನೋಡಲ್ ಅಧಿಕಾರಿ ನೇಮಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

