ರಾಜಕೀಯ

5 ವರ್ಷಗಳ ಗೊಂದಲ ನೋವಾಗಿದೆ, ಕ್ಷಮೆಯಾಚಿಸುತ್ತೇನೆ

Published On :

ತುಮಕೂರು: ಕಳೆದ 5 ವರ್ಷಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಗೊಂದಲಗಳುಂಟಾಗಿವೆ. ಇದಕ್ಕಾಗಿ ತಾವು ಮತದಾರರು, ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸುವುದಾಗಿ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ತಿಳಿಸಿದರು. ಅವರು ತುಮಕೂರಿನಲ್ಲಿ ಏರ್ಪಾಟಾಗಿದ್ದ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿಯಲ್ಲಿ ಗೊಂದಲ, ಭಿನ್ನಮತ ಉಂಟಾದ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಪಕ್ಷಕ್ಕೆ ಹಿನ್ನೆಡೆಯಾಗಿರಬಹುದು. ಆದರೆ ಅಭಿವೃದ್ಧಿ ವಿಷಯದಲ್ಲಿ ಹಾಗಾಗಿಲ್ಲ. ಸಿಎಂಗಳು ಬದಲಾದರೂ ಸ್ಥಿರ ಸರ್ಕಾರ ನೀಡಿದ ಖ್ಯಾತಿ ಬಿಜೆಪಿಯದ್ದು. ತಾವು ಹಾಗೂ ಶೆಟ್ಟರ್ ಸಿಎಂ ಆದ ಮೇಲೆ ಕಾರ್ಯಕರ್ತರ ಮನೋಸ್ಥಿತಿಗೆ ತಕ್ಕಂತೆ ರಾಜನೀತಿ ರೂಪಿಸಿದೆವು. ಕಳೆದ 5 ವರ್ಷಗಳಲ್ಲಿ ಅಗಾಧ ಸಾಧನೆ ಆಗಿದೆ. ಕಾಂಗ್ರೆಸ್-ಜೆಡಿಎಸ್ ಅಪಪ್ರಚಾರದ ನಡುವೆ ಬಿಜೆಪಿ ಸರ್ಕಾರ ಅವಧಿ ಸಂಪೂರ್ಣಗೊಳಿಸಿದೆ ಎಂದು ಹೆಮ್ಮೆಪಟ್ಟುಕೊಂಡರು.
ಜೆಡಿಎಸ್, ಕಾಂಗ್ರೆಸ್‌ಗಳಷ್ಟೇ ಲೆಕ್ಕಕ್ಕೆ: ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಹೊರತಾಗಿ ಬೇರೆ ಪಕ್ಷಗಳು ಲೆಕ್ಕಕ್ಕಿಲ್ಲ ಎಂದು ಹೇಳುವ ಮೂಲಕ  ಕೆಜೆಪಿಯನ್ನು ಅಲ್ಲಗಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.