ಮತದಾರರಿಗೆ ವಾಚು, ಸೀರೆ ಹಂಚುತ್ತಿರುವ ಡಿಕೆಶಿ: ಸಿಂಧ್ಯಾ
ಮರಳಿ ಅಧಿಕಾರ ಹಿಡಿಯುವ ಸಲುವಾಗಿ ಕಾಂಗ್ರೆಸ್ ವಾಮಮಾರ್ಗ ಅನುಸರಿಸುತ್ತಿದ್ದು, ನೀತಿ ಸಂಹಿತೆ ಜಾರಿಯಲ್ಲಿದ್ದರೂ...

ಬೆಂಗಳೂರು: ಮರಳಿ ಅಧಿಕಾರ ಹಿಡಿಯುವ ಸಲುವಾಗಿ ಕಾಂಗ್ರೆಸ್ ವಾಮಮಾರ್ಗ ಅನುಸರಿಸುತ್ತಿದ್ದು, ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಮತದಾರರಿಗೆ ವಾಚು, ಸೀರೆ ಹಂಚಿದ್ದಾರೆ ಎಂದು ಜೆಡಿಎಸ್ ಕಾರ್ಯಕಾರಿ ಅಧ್ಯಕ್ಷ ಪಿ.ಜಿ.ಆರ್. ಸಿಂಧ್ಯಾ ಆರೋಪಿಸಿದ್ದಾರೆ.
ಕನಕಪುರ ಕ್ಷೇತ್ರದಲ್ಲಿ ಮತದಾರರಿಗೆ ಸೀರೆ, ವಾಚು, ನೀರಿನ ಕ್ಯಾನ್ ಸೇರಿದಂತೆ ನಾನಾ ವಸ್ತುಗಳನ್ನು ವ್ಯಾಪಕವಾಗಿ ಹಂಚಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ರಾಜಕಾರಣ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಟೀಕಿಸಿದರು.ಶಿವಕುಮಾರ್ ವ್ಯಾಪಕ ಅ ಕ್ರಮಗಳನ್ನು ನಡೆಸುತ್ತಿದ್ದಾರೆ. ಹಲವು ವಸ್ತುಗಳನ್ನು ಹಂಚುವ ಜತೆಗೆ ಆಮಿಷಗಳನ್ನು ನೀಡಿ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು. ಈ ಕ್ಷೇತ್ರದಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಈ ಮತದಾರರನ್ನು ಸೇರಿಸುವ ಕಾರ್ಯ ಎರಡು -ಮೂರು ವಾರ್ಡ್ಗಳಲ್ಲಿ ನಡೆದಿದೆ. ಚುನಾವಣೆ ಗೆಲ್ಲಲೇಬೇಕೆಂಬ ಹಠದಿಂದ ವಾಮಮಾರ್ಗದಲ್ಲಿ ಮತದಾರರನ್ನು ಸೆಳೆಯುತ್ತಿದ್ದಾರೆ. ಅಧಿಕಾರಿಗಳು ಅಕ್ರಮ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದರು.
ಕನಕಪುರ ಕ್ಷೇತ್ರ ಜೆಡಿಎಸ್ಗೆ ಪ್ರತಿಷ್ಠೆಯಾಗಿದ್ದು, ಇಂತಹ ಎಷ್ಟೇ ಅಕ್ರಮಗಳನ್ನು ಕಾಂಗ್ರೆಸ್ ನಾಯಕರು ನಡೆಸಿದರೂ ಪಕ್ಷದ ಗೆಲವನ್ನು ತಪ್ಪಿಸಲಾಗದು. ಕೇಂದ್ರ ಚುನಾವಣೆ ಆಯುಕ್ತರು ಏಪ್ರಿಲ್ನಲ್ಲಿ ನಗರಕ್ಕೆ ಆಗಮಿಸುತ್ತಿದ್ದು, ಅವರಿಗೆ ಈ ಎಲ್ಲ ಅಕ್ರಮಗಳ ಬಗ್ಗೆ ದೂರು ನೀಡಲಾಗುತ್ತದೆ ಎಂದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ರಾಜ್ಯ ರಾಜಕಾರಣವನ್ನು ರಾಜ್ಯದವರೇ ನಿಯಂತ್ರಿಸಬೇಕು ಎಂಬುದು ಜೆಡಿಎಸ್ನ ಸ್ಪಷ್ಟ ನಿಲುವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿಯಿಂದ ರಾಜ್ಯದ ಆಡಳಿತದ ಮೇಲೆ ದುಷ್ಪರಿಣಾಮ ಬೀರಿದ್ದು, ಇದನ್ನು ತೊಲಗಿಸಲು ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದರು. ವಿಶ್ವನಾಥ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


