ರಾಜಕೀಯ ನಿವೃತ್ತಿ: ಮಾಜಿ ಶಾಸಕ ಸುರೇಶಗೌಡ ಚಿಂತನೆ

Updated on: 

ಬ್ಯಾಡಗಿ: ಬ್ಯಾಡಗಿಯ ಮಾಜಿ ಶಾಸಕ ಸುರೇಶಗೌಡ ಪಾಟೀಲ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ವೈಯಕ್ತಿಕ ಕಾರಣದ ಹಿನ್ನೆಲೆಯಲ್ಲಿ ರಾಜಕೀಯ ನಿವೃತ್ತಿ ಪಡೆಯಲು ಚಿಂತಿಸಿದ್ದು, ಎರಡ್ಮೂರು ದಿನಗಳಲ್ಲಿ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು. ಬ್ಯಾಡಗಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಿಢೀರ್ ಕಣದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿ ಅಚ್ಚರಿ ಮೂಡಿಸಿದರು. ಮೂಲತಃ ಬ್ಯಾಡಗಿ ಕ್ಷೇತ್ರದ ಬಿಜೆಪಿ ಶಾಸಕರಾದ ಸುರೇಶಗೌಡರು ಹಾವೇರಿಯಲ್ಲಿ ನಡೆದ ಕೆಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ನಿಷ್ಠೆ ತೋರಿದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿ ಕೆಜೆಪಿ ಸೇರ್ಪಡೆಯಾಗಿದ್ದರು. ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೂ ಬ್ಯಾಡಗಿ ಕ್ಷೇತ್ರದಿಂದ ಸುರೇಶಗೌಡರ ಹೆಸರೂ ಇದೆ. ಆದರೆ ಈಗ ದಿಢೀರ್ ಇವರು ಕಣದಿಂದ ಹಿಂದೆ ಸರಿಯುತ್ತಿರುವುದಕ್ಕೆ ಕಾರಣ ತಿಳಿದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com