ಹುಕ್ಕೇರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಕೃಷಿ ಸಚಿವ ಉಮೇಶ ಕತ್ತಿ ಕಳೆದ 15 ದಿನಗಳಿಂದ ರಾಜಕೀಯ ವಲಯದಲ್ಲಿ ಎದ್ದಿದ್ದ ಊಹಾಪೋಹಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಹೇಳಿದ್ದಾರೆ. ಇಲ್ಲಿಯ ವಿಶ್ವನಾಥ ಕತ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಹುಕ್ಕೇರಿ ತಾಲೂಕು ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಳೆದ ನಾಲ್ಕೂವರೆ ವರ್ಷಗಳಿಂದ ಬಿಜೆಪಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕಾಂರ್ು ಕೈಗೊಂಡಿದೆ ಎಂದರು.