ಮತದಾರರಿಗೆ ಕೃತಜ್ಞತೆ ಸಲ್ಲಿಸಲು 30ರಂದು ಸೋನಿಯಾ ಮಂಡ್ಯಕ್ಕೆ

Updated on: 

ಬೆಳಗಾವಿ: ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ, ಅಭ್ಯರ್ಥಿ ಗೆಲವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೆ.30ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3 ಗಂಟೆಗೆ ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿಂದೆಯೇ ಅವರು ಮಂಡ್ಯಕ್ಕೆ ಬರುವ ಕಾರ್ಯಕ್ರಮವಿತ್ತಾದರೂ ಅನಾರೋಗ್ಯದ ಹಿನ್ನೆಲೆಯಲ್ಲಿ ಸಾಧ್ಯವಾಗಿರಲಿಲ್ಲ ಎಂದರು. ಸಚಿವರು, ಶಾಸಕರ ಸಾಧನೆಯ ಮೌಲ್ಯಮಾಪನ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ನನ್ನ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್ ಹೇಳಿದ ಕಾಂರ್ುವನ್ನು ಪಾಲಿಸುವುದಷ್ಟೇ ನಮ್ಮ ಕೆಲಸವಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಕುರಿತು ಎಲ್ಲ ಜಿಲ್ಲೆಗಳಿಂದ ಆಕಾಂಕ್ಷಿಗಳ ಪಟ್ಟಿ ಕಳುಹಿಸಲಾಗಿದೆ. ಅವುಗಳನ್ನು ಪರಿಷ್ಕರಣೆ ಮಾಡಿ ಡಿಸೆಂಬರ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಹಳಬರು ಹಾಗೂ ಹೊಸಬರಿಗೂ ಟಿಕೆಟ್ ಲಭ್ಯವಾಗಲಿದೆ ಎಂದರು. ಂಾವುದೇ ಸಮುದಾಂುಕ್ಕೆ ಅನ್ಯಾಂು ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದ ಜನತೆಂು ಅಭಿವೃದ್ಧಿಯೇ ಪಕ್ಷದ ಧ್ಯೇಂುವಾಗಿದೆ ಎಂದರು.

ಸಂತೋಷ್ ಲಾಡ್ ವಿರುದ್ಧ ಆರೋಪ ಪರಿಶೀಲನೆ
ವಾರ್ತಾ ಮತ್ತು ಪ್ರಚಾರ ಇಲಾಖೆ ಸಚಿವ ಸಂತೋಷ ಲಾಡ್ ಗಣಿ ಹಗರಣದಲ್ಲಿ ಶಾಮೀಲಾಗಿದ್ದಾರೆಂಬ ಆರೋಪದ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ಯಾರೋ ಆರೋಪ ಮಾಡಿದ್ದಾರೆಂಬ ಮಾತ್ರಕ್ಕೆ ಲಾಡ್ ಆರೋಪಿ ಆಗುವುದಿಲ್ಲ.
ಈ ವಿಷಯದ ಕುರಿತು ಸಮಗ್ರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಂತೋಷ ಲಾಡ್ ತಪ್ಪಿತಸ್ಥರಾಗಿದ್ದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸೂಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರ್ಯಕರ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
-ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com