'ಹೈ' ಮೆಟ್ಟಿಲೇರಿದ ಯಡಿಯೂರಪ್ಪ

ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕಿಕ್ ಬ್ಯಾಕ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಂಮಂತ್ರಿ, ಹಾಲಿ ಸಂಸದ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜಿಂದಾಲ್ ಗ್ರೂಪ್‌ನ ಸೌತ್‌ವೆಸ್ಟ್ ಮೈನಿಂಗ್ ಕಂಪನಿಯಿಂದ ಗಣಿ ಕಪ್ಪ ಪಡೆದಿರುವುದಾಗಿ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿತ್ತು.

ಯಡಿಯೂರಪ್ಪ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ಏಕ ಸದಸ್ಯ ಪೀಠ, ಸಿಬಿಐ ಪೊಲೀಸರಿಗೆ ನೋಟಿಸ್ ನೀಡಿ ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.

ಪ್ರಕರಣ ಹಿನ್ನೆಲೆ:
ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಿಂದಾಲ್ ಗ್ರೂಪ್‌ನ ಸೌತವೆಸ್ಟ್ ಮೈನಿಂಗ್ ಕಂಪನಿ ಗಣಿ ಪರವಾನಗಿ ಕೊಡಿಸಿದ್ದರು. ಇದರಿಂದಾಗಿ ಸೌತವೆಸ್ಟ್ ಕಂಪನಿಯು ಯಡಿಯೂರಪ್ಪ ಪುತ್ರರ ಒಡೆತನದ ಪ್ರೇರಣಾ ಟ್ರಸ್ಟ್‌ಗೆ 2006ರ ಮಾರ್ಚ್ ನಂತರ 2011ರವರೆಗೆ ಸುಮಾರು ರು. 20 ಕೋಟಿ ಸಂದಾಯ ಮಾಡಿದೆ ಎಂಬ ಆರೋಪ ಸಂಬಂಧ ಸಿಬಿಐ ಪೊಲೀಸರು ತನಿಖೆ ನಡೆಸುತ್ತಿದ್ದರು.

ಸಿಬಿಐ ಪೊಲೀಸರ ತನಿಖೆ ಮತ್ತು ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪಪ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com