
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಆಗಮಿಸಿದ್ದು, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.
ಪಕ್ಷ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಮನ್ವಯತೆ ಮತ್ತು ಪಕ್ಷ ಬಲವರ್ಧನೆ ಕುರಿತು ಪದಾಧಿಕಾರಿಗಳೊಂದಿಗೆ ಪ್ರಧಾನಿ ಚರ್ಚಿಸುತ್ತಿದ್ದಾರೆ.
ಇಂದು ಮಧ್ಯಾಹ್ನ 3.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ನಗರದ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಮೋದಿ ಎಚ್‌ಎಎಲ್ ಏರ್‌ಪೋರ್ಟ್‌ನಿಂದ ನೇರವಾಗಿ ರಾಜಭವನಕ್ಕೆ ತೆರಳಿ, ಅಲ್ಲಿಂದ ಪಕ್ಷದ ಕಾರ್ಯಕಾರಣಿ ಸಭೆ ನಡೆಯುತ್ತಿರುವ ಅಶೋಕ ಹೋಟೆಲ್‌ಗೆ ಆಗಮಿಸಿದ ಪ್ರಧಾನಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ.
Advertisement