

ಬೆಂಗಳೂರು: ಚಿಕ್ಕಬಳ್ಳಾಪುರ ಜೆಎಂಎಫ್ ಸಿ ಕೋರ್ಟ್‍ನಲ್ಲಿ ಸಂಸದ ಎಂ.ವೀರಪ್ಪ ಮೊಯ್ಲಿ ವಿರುದಟಛಿ ದಾಖಲಾಗಿರುವ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆ ಮುಂದುವರಿಸದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ತಡೆ ನೀಡುವಂತೆ ಕೋರಿ ವೀರಪ್ಪ ಮೊಯ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎ.ಎನ್. ವೇಣುಗೋಪಾಲ ಗೌಡ ಅವರಿದ್ದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್ ಸಿ ನ್ಯಾಯಾಲಯ 12 ವಾರಗಳ ಕಾಲ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಆದೇಶಿಸಿದೆ.