ವರ್ತೂರುಗೆ ಜಾಮೀನು

ಮರಳು ಸಾಗಣೆ ವಿಚಾರವಾಗಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಧಮಕಿ ಹಾಕಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ...
ಶಾಸಕ ವರ್ತೂರು ಪ್ರಕಾಶ್
ಶಾಸಕ ವರ್ತೂರು ಪ್ರಕಾಶ್

ಕೋಲಾರ: ಮರಳು ಸಾಗಣೆ ವಿಚಾರವಾಗಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಧಮಕಿ ಹಾಕಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಹಾಲಿ ಶಾಸಕ ವರ್ತೂರು
ಆರ್. ಪ್ರಕಾಶ್ ಅವರಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಮಾನವ ಹಕ್ಕುಗಳ ಹೋರಾಟಗಾರ ಬೆಂಗಳೂರಿನ ಗಿರೀಶ್ ಗೌಡ ಮಾ .31ರಂದು ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಕೋಲಾರದ ಲೋಕಾಯುಕ್ತ ಎಸ್ಪಿಗೆ ದೂರು ದಾಖಲಿಸಿದ್ದರು.

ವರ್ತೂರು ಮೊದಲ ಬಾರಿ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಮರಳು ಲಾರಿಗಳಿಗೆ ಅಡ್ಡಿಪಡಿಸದಂತೆ ದೂರವಾಣಿ ಮೂಲಕ ಮುಳಬಾಗಿಲು ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕಿ ಲೋಕಾಯುಕ್ತ ಸಂಸ್ಥೆಯ ಹೆಸರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕೋಲಾರ ಲೋಕಾಯುಕ್ತ ಪೊಲೀಸರು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಪ್ರಕರಣ ಒಪ್ಪಿಸಿದ್ದರು.

ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಆದ ವಿಷಯ ತಿಳಿಯುತ್ತಿದ್ದಂತೆ ಶಾಸಕ ವರ್ತೂರ್ ಪ್ರಕಾಶ್ ನಿರೀಕ್ಷಣಾ ಜಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com