

ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಸರ್ವ ಪಕ್ಷ ನಿಯೋಗ ಏ.30 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ.
ಈ ಸಂಬಂಧ ಭೇಟಿಗೆ ಅವಕಾಶ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ, ಅಂದು ಮಧ್ಯಾಹ್ನ 1 ಗಂಟೆಗೆ ಭೇಟಿ ನಿಗದಿ ಪಡಿಸಿದೆ.
ನಿಯೋಗದಲ್ಲಿ ಪ್ರಧಾನಿ ಭೇಟಿ ಮಾಡಿ ಮೇಕೆದಾಟು ಯೋಜನೆ ಅಗತ್ಯ ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಂತೆ ಏ.22ಕ್ಕೆ ಪ್ರಧಾನಿಗೆ ಪತ್ರ ಬರೆದಿದ್ದ ಸಿಎಂ ಭೇಟಿಗೆ ಅವಕಾಶ ಮಾಡಿಕೊಡಲು ಮನವಿ ಮಾಡಿದ್ದರು. ಆದರೆ, ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರ ಬಂದಿರಲಿಲ್ಲ. ಹೀಗಾಗಿ, ಮತ್ತೆ ಪತ್ರ ಬರೆದಿದ್ದರು.