ಕಾಂಗ್ರೆಸ್‍ಗೆ ಅಧಿಕಾರ ಖಚಿತ: ಪರಮೇಶ್ವರ್

ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ವಿಶ್ವಾಸ...
ಜಿ ಪರಮೇಶ್ವರ್
ಜಿ ಪರಮೇಶ್ವರ್
Updated on: 

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ನಾನು ಇದುವರೆಗೆ ಸುಮಾರು 30 ವಾರ್ಡ್‍ಗಳಲ್ಲಿ ಪ್ರಚಾರ ನಡೆಸಿದ್ದೇನೆ. ಜನರ ಪ್ರತಿಕ್ರಿಯೆ ಕಾಂಗ್ರೆಸ್ ಪರವಾಗಿದೆ.

ಬಿಬಿಎಂಪಿ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸವಿದೆ ಎಂದು ಹೇಳಿದರು. ಕಾಂಗ್ರೆಸ್‍ಗೆ ಹಿನ್ನಡೆಯಾದರೆ ದೇಶಕ್ಕೆ ಹಿನ್ನಡೆಯಾದಂತೆ. ಪ್ರಜಾಪ್ರಭುತ್ವಕ್ಕೆ ಧಕ್ಕೆಯಾದರೆ ದೇಶ ಉಳಿಯುವುದಿಲ್ಲ. ದೇಶದ ಏಳ್ಗೆಗೆ ಪ್ರತಿಯೊಬ್ಬರು ದುಡಿಯಬೇಕು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎಲ್ಲ ಸಂದರ್ಭದಲ್ಲಿ ರಾಷ್ಟ್ರದಆರ್ಥಿಕ ಅಭಿವೃದ್ಧಿ ದರವನ್ನು ಹೆಚ್ಚಿಸಿದೆ. ಪ್ರಪಂಚದ ಆರ್ಥಿಕ ವ್ಯವಸ್ಥೆಯಲ್ಲಿ ಏಳುಬೀಳು ಕಂಡರೂ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನಮ್ಮ ಅರ್ಥ ವ್ಯವಸ್ಥೆ ಸದೃಢವಾಗಿತ್ತು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com