ಬಿಬಿಎಂಪಿ ಮೇಯರ್ ಹುದ್ದೆಗಾಗಿ ಯಾವುದೇ ಮೈತ್ರಿ ಇಲ್ಲ: ಸಿಎಂ ಸ್ಪಷ್ಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹುದ್ದೆಗಾಗಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹುದ್ದೆಗಾಗಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಿಬಿಎಂಪಿಯಲ್ಲಿ ಯಾವುದೇ ಪಕ್ಷದೊಂದಿಗೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಹ, ಇದುವರೆಗೂ ಅಂತಹ ಯಾವುದೇ ಬೆಳವಣಿಗೆಗಳು ನನ್ನ ಗಮನಕ್ಕೆ ಬಂದಿಲ್ಲ. ಒಂದು ನನ್ನ ಗಮನಕ್ಕೆ ಬಂದರೆ ಚರ್ಚಿಸುವೆ ಎಂದಿದ್ದಾರೆ.

ಬೆಂಗಳೂರು ಜನತೆ ನಮಗೆ 76 ಸ್ಥಾನ ನೀಡಿದ್ದಾರೆ. ನಮ್ಮ ಸ್ಥಾನ ಏನು ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ ಎಂದಿರುವ ಪರಮೇಶ್ವರ್, ಮೇಯರ್ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್ ಕಾರ್ಪೊರೇಟರಗಳಿಗೆ ವಾರ್ಡ್ ತೊರೆಯದಂತೆ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ದೃಷ್ಟಿಯಿಂದ ಜೆಡಿಎಸ್ ಬಿಬಿಎಂಪಿಯ ಅಧಿಕಾರಕ್ಕಾಗಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿತ್ತು. ಆದರೆ ಕಾಂಗ್ರೆಸ್ ಇದಕ್ಕೆ ನಿರಾಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com