ಮೈತ್ರಿ ತಪ್ಪಲ್ಲ: ಪೂಜಾರಿ

ಬಿಬಿಎಂಪಿ ಅಧಿಕಾರಕ್ಕಾಗಿ ಜೆಡಿಎಸ್ ಜತೆ ಕಾಂಗ್ರೆಸ್ ಕಾನೂನು ಪ್ರಕಾರ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಮೈತ್ರಿ ಮಾಡಲೇಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಹೇಳಿದರು...
ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ
ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ

ಮಂಗಳೂರು: ಬಿಬಿಎಂಪಿ ಅಧಿಕಾರಕ್ಕಾಗಿ ಜೆಡಿಎಸ್ ಜತೆ ಕಾಂಗ್ರೆಸ್ ಕಾನೂನು ಪ್ರಕಾರ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಮೈತ್ರಿ ಮಾಡಲೇಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹಿಂದೆ ಬಹುಮತ ಇದ್ದಾಗಲೂ ಬಿಜೆಪಿಯವರು ಆಪರೇಷನ್ ಕಮಲ ಮಾಡಿಲ್ಲವೇ? ಅದು ಸರಿಯೇ? ಹೊರಗೆ ಮೈತ್ರಿ
ಬಗ್ಗೆ ಕಾಂಗ್ರೆಸ್‍ಗೆ ಬುದ್ಧಿ ಮಾತು ಹೇಳುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಗುಟ್ಟಿನಲ್ಲಿ ದೇವೇಗೌಡರ ಮನೆ ಬಾಗಿಲಿಗೆ ಹೋಗುವುದು ಎಷ್ಟು ಸರಿ? ಮಹದಾಯಿ ವಿವಾದಕ್ಕೆ ಕಾಂಗ್ರೆಸ್, ಜೆಡಿಎಸ್ ಕಾರಣ ಎಂದು ತೆಗಳಿ ಈಗ ಜೆಡಿಎಸ್ ಬಳಿ ಹೋಗುವುದು ಯಾವ ನೈತಿಕತೆ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com