ಭಿನ್ನಮತ ಎಲ್ಲ ಪಕ್ಷದಲ್ಲೂ ಇರುತ್ತದೆ: ಎಚ್.ಡಿ ದೇವೇಗೌಡ

ಭಿನ್ನಮತ ಎಂಬುದು ಎಲ್ಲಾ ಪಕ್ಷಗಳಲ್ಲಿಯೂ ಇರುತ್ತದೆ. ಜೆಡಿಎಸ್ ಅದರಿಂದ ಹೊರತಲ್ಲ. ಇದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ....
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
Updated on: 

ಬೆಂಗಳೂರು: ಭಿನ್ನಮತ ಎಂಬುದು ಎಲ್ಲಾ ಪಕ್ಷಗಳಲ್ಲಿಯೂ ಇರುತ್ತದೆ. ಜೆಡಿಎಸ್ ಅದರಿಂದ ಹೊರತಲ್ಲ. ಇದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ  ಟಿಕೆಟ್ ಹಂಚಿಕೆ ಸಂಬಂಧ ಚಲುವರಾಯಸ್ವಾಮಿ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ.

ಶಾಸಕ ಚಲುವರಾಯಸ್ವಾಮಿ ಮೇಲೆ ನಾವು ಗದಾ ಪ್ರಹಾರ ಮಾಡಿಲ್ಲ, ನಾನು ಬರಿಗೈಯಲ್ಲಿದ್ದೇನೆ. ಅವರಿಗೆ ಈ ಹಿಂದೆ ಸಚಿವ ಸ್ಥಾನ ಕಲ್ಪಿಸಿದ್ದೇವೆ. ಅವರು ಜಿಲ್ಲೆಯ ನಾಯಕರಾಗಿದ್ದಾರೆ. ಪರಿಷತ್ ಟಿಕೆಟ್ ಹಂಚಿಕೆ ಬಗ್ಗೆ ಸ್ವಲ್ಪ ಅಸಮಾಧಾನ ಇದೆ. ಮುಂದೆ ಎಲ್ಲವೂ ಸರಿಹೋಗುತ್ತದೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com