ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ; ಸಿಎಂ

ಡಿಸೆಂಬರ್ 27ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಚಾಮರಾಜನಗರ: ಡಿಸೆಂಬರ್ 27ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ  ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ಕಳೆದ ಚುನಾವಣೆಯಲ್ಲಿನ ಕಹಿ ಅನುಭವದ ಹಿನ್ನೆಲೆಯಲ್ಲಿ ಈ ಬಾರಿ ದ್ವಿಸದಸ್ಯ ಕ್ಷೇತ್ರದಲ್ಲಿ ಪಕ್ಷದಿಂದ ಒಬ್ಬರನ್ನು ಮಾತ್ರ ಕಣಕ್ಕಿಳಿಸಲಾಗುವುದು ಮತ್ತು ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ತಿಳಿಸಿದರು.

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಮೂಢನಂಬಿಕೆ. ನಾನು ಮುಖ್ಯಮಂತ್ರಿಯಾದ ನಂತರ ಮೂರು ಬಾರಿ ಇಲ್ಲಿಗೆ ಬಂದಿದ್ದೇನೆ. ಮೂರು ಬಾರಿ ಅಧಿಕಾರ ಕಳೆದುಕೊಳ್ಳಬೇಕಿತ್ತು. ಆದರೆ ಒಮ್ಮೆಯೂ ನಾನು ಅಧಿಕಾರ ಕಳೆದುಕೊಂಡಿಲ್ಲ. ಬದಲಾಗಿ ನಾನು ಚಾಮರಾಜನಗರಕ್ಕೆ ಬಂದಾಗ ನನ್ನ ಶಕ್ತಿ ಹೆಚ್ಚಿದೆ ಎಂದರು.

ಬೆಂಗಳೂರು ನಗರದಲ್ಲಿ ದಯಾನಂದ ರೆಡ್ಡಿ ಹಾಗೂ ಉಡುಪಿ ಕ್ಷೇತ್ರದಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿ ಪರಿಷತ್ ಚುನಾವಣೆ ಸ್ಪರ್ಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com