ಪರಿಷತ್ ಚುನಾವಣೆ: ಡಿಕೆಶಿ ಸಂಧಾನ ವಿಫಲ, 'ಕೈ'ಗೆ ಬಂಡಾಯದ ಬಿಸಿ

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಬಂಡಾಯ ಶಮನ ಮಾಡಲು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ನಡೆಸಿದ ಸಂಧಾನ ಸಭೆ...
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಬಂಡಾಯ ಶಮನ ಮಾಡಲು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ದಯಾನಂದ ರೆಡ್ಡಿ ಅವರು ನಾಮಪತ್ರ ಹಿಂಪಡೆಯಲು ನಿರಾಕರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಡಿಕೆ ಶಿವಕುಮಾರ್ ಅವರು ಇಂದು ದಯಾನಂದ ರೆಡ್ಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಡಿಕೆಶಿ ಸಂಧಾನ ವಿಫಲವಾಗಿದೆ. ಸಂಧಾನ ಸಭೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ದಯಾನಂದ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನನ್ನ ಮತ್ತು ರಾಮಲಿಂಗಾ ರೆಡ್ಡಿ ನಡುವಿನ ಪ್ರತಿಷ್ಠೆಯ ಪ್ರಶ್ನೆ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ. ಒಂದೋ ನಾನು ಗೆಲ್ಲಬೇಕು, ಇಲ್ಲ ಅವರು ಗೆಲ್ಲಬೇಕು ಎಂದು ರೆಡ್ಡಿ ಖಡಕ್ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಉಡುಪಿ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದ್ದಾರೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಾಳಯಕ್ಕೆ ಬಂಡಾಯದ ಬಿಸಿ ಮುಂದುವರಿದಂತಾಗಿದೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕಡೆಯ ದಿನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com