ತಿಪ್ಪರಲಾಗ ಹಾಕಿದ್ರೂ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ

ಬಿಜೆಪಿ ಹಾಗೂ ಜೆಡಿಎಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಮತ್ತೆ ನಾವೇ (ಕಾಂಗ್ರೆಸ್) ಅಧಿಕಾರಕ್ಕೆ ಬರುತ್ತೇವೆ. ಅವರ ಅಪ್ಪನ ಆಣೆಗೂ ಆ ಪಕ್ಷದವರು ಅಧಿಕಾರಕ್ಕೆ ಬರಲ್ಲ, ಅದು ಸಾಧ್ಯವೂ ಇಲ್ಲ' ಎಂದು ಹೇಳಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದು ಎರಡೂವರೆ ವರ್ಷ ಕಳೆದಿದ್ದರೂ ಒಂದೇ ಒಂದು ಹಗರಣ ನಡೆದಿಲ್ಲ. ಹಗರಣ ನಡೆದಿರುವುದಾಗಿ ಕೆಲವರು ಆರೋಪ ಮಾಡುತ್ತಿದ್ದಾರಷ್ಟೇ. ಪರಿಷತ್ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್‍ಗಿಂತ ಕಾಂಗ್ರೆಸ್‍ಗೆ ಹೆಚ್ಚಿನ ಅವಕಾಶವಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com