ಅರ್ಕಾವತಿ ವಿಚಾರದಲ್ಲಿ ಅಕ್ರಮ ನಡೆದಿಲ್ಲ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿ ಫೈ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸವೂ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿ ಫೈ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸವೂ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫೈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಯುತ್ತಿದೆ. ಆ ಬಳಿಕ ಪ್ರಕರಣದ ಸತ್ಯಾಸತ್ಯತೆ ಬಹಿರಂಗವಾಗಲಿದೆ.

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಕೋರ್ಟ್‍ಗೆ ಹೋಗಿದ್ದಾರೆ. ಕೋರ್ಟ್ ಸಿಬಿಐಗೆ ವಹಿಸಲು ಸರ್ಕಾರಕ್ಕೆ ಸೂಚಿಸಿದರೆ ಹಾಗೆಯೇ ಮಾಡುತ್ತೇವೆ. ಸದ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಜೆ ಮೇಲಿದ್ದಾರೆ. ಹೀಗಾಗಿ ಡಿ. 28ರಂದು ನಡೆಯಬೇಕಿದ್ದ ಲೋಕಾಯುಕ್ತ ನೇಮಕ ವಿಚಾರದ ಸಭೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ ಎಂದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಹಣ ಮಂಜೂರು ಮಾಡಿದೆಯೇ ಹೊರತು ಇದುವರೆಗೂ ರು. 1 ಕೂಡ ಬಿಡುಗಡೆ ಮಾಡಿಲ್ಲ. ಜನರ ದಾರಿ ತಪ್ಪಿಸುವುದಕ್ಕಾಗಿ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಸುಳ್ಳು ಹೇಳುತ್ತ ತಿರುಗಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಅಧಿಕಾರ ವಿಕೇಂದ್ರೀಕರಣ ಹಾಗೂ ಸಾಮಾೇಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸುತ್ತಿದ್ದಾರೆ ಎಂದರು.

ಮಧ್ಯಂತರ ಅರ್ಜಿ:
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಸ್.ಆರ್. ಹಿರೇಮಠ ಅವರು ಮಾಜಿ ಲೋಕಾಯುಕ್ತ ನ್ಯಾ. ಭಾಸ್ಕರ್‍ರಾವ್‍ರನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಜತೆಗೆ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com