

ಮದ್ದೂರು: ಬೆಂಗಳೂರಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವಕ್ಕೆ ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಪಾಲ್ಗೊಳ್ಳದಂತೆ ರಾಜ್ಯಸರ್ಕಾರ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಪ್ರವೀಣ್ ತೊಗಾಡಿಯಾ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿರುವುದು ನಿಜ. ಹಾಗೆಂದ ಮಾತ್ರಕ್ಕೆ ಅವರು ಬೆಂಗಳೂರು ಪ್ರವೇಶಿದಂತೆ ನಿಷೇಧ ಹೇರಿದ ಕ್ರಮ ಸರಿಯಲ್ಲ ಎಂದರು.
ಈ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಅಧಿಕಾರದಲ್ಲಿದ್ದಾಗ ನಡೆದ ಹಿಂದೂ ಸಮಾವೇಶಗಳಲ್ಲಿ ಪ್ರವೀಣ್ ತೊಗಾಡಿಯಾ ಭಾಗವಹಿಸಿರುವ ಉದಾಹರಣೆಗಳಿವೆ. ಆಗೆಲ್ಲ ಇಲ್ಲದ ನಿಷೇಧವನ್ನು ಈಗ ಕಾಂಗ್ರೆಸ್ ಸರ್ಕಾರ ಹೇರಿರುವುದು ಸಹಜವಾಗಿಯೇ ಪ್ರಶ್ನೆ ಮಾಡುವಂತೆ ಮಾಡಿದೆ ಎಂದು ಹೇಳಿದರು.