ಭ್ರಷ್ಟರಿಗೆ ಬಡ್ತಿ ಭಕ್ಷೀಸು

ಲೋಕೋಪಯೋಗಿ ಇಲಾಖೆಯಲ್ಲಿ 10 ವರ್ಷಗಳಿಂದ 54 ಪ್ರಕರಣಗಳಲ್ಲಿ ಹಣ ದುರುಪಯೋಗ ಪಡಿಸಿಕೊಂಡ
ಎಚ್.ಸಿ.ಮಹದೇವಪ್ಪ
ಎಚ್.ಸಿ.ಮಹದೇವಪ್ಪ
Updated on

ವಿಧಾನ ಪರಿಷತ್ತು: ಲೋಕೋಪಯೋಗಿ ಇಲಾಖೆಯಲ್ಲಿ 10 ವರ್ಷಗಳಿಂದ 54 ಪ್ರಕರಣಗಳಲ್ಲಿ ಹಣ ದುರುಪಯೋಗ ಪಡಿಸಿಕೊಂಡ ಆಪಾದನೆ ಬಂದಿದೆ. ಈ ಪ್ರಕರಣಗಳಲ್ಲಿ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಸಕ್ತಿ ವಹಿಸುತ್ತಿಲ್ಲ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ  ವಾಗ್ದಾಳಿ ನಡೆಸಿದವು. ಸದಸ್ಯ ಬಸವರಾಜ ಹೊರಟ್ಟಿ ಅವರ ಪ್ರಶ್ನೆಗೆ ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಉತ್ತರಿಸಿ, 54 ಹಣ ದುರುಪಯೋಗ ಪ್ರಕರಣಗಳ ಪೈಕಿ 13 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದೆ. 41 ಪ್ರಕರಣ ಬಾಕಿ ಇದೆ ಎಂದು ಮಾಹಿತಿ ನೀಡಿದರು. ಈ ವೇಳೆಗೆ ಮಾತನಾಡಿದ ಹೊರಟ್ಟಿ, ಒಟ್ಟಾರೆ 54 ಪ್ರಕರಣಗಳಿಂದ ಅಂದಾಜು ರು 100 ಕೋಟಿ ದುರುಪಯೋಗವಾಗಿದೆ ಎಂದು ಅಂಕಿಸಂಖ್ಯೆ ಹೇಳುತ್ತಿದೆ. ಇಷ್ಟಾದರೂ ಸರ್ಕಾರ ಈ ವಿಚಾರದಲ್ಲಿ ಗಂಭೀರ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿಲ್ಲ ಎಂದರು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com