

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.
2001ರಲ್ಲಿ ಕೈಗಾರಿಕಾ ಸಚಿವರಾಗಿದ್ದ ಆರ್.ವಿ ದೇಶಪಾಂಡೆ ಅವರು ಅಕ್ರಮವಾಗಿ 402 ಎಕರೆ ಭೂಮಿಯನ್ನು ಡಿ ನೋಟಿಫೈ ಮಾಡಿದ್ದು ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ವಶಪಡಿಸಿಕೊಳ್ಳಬೇಕಿದ್ದ ಸುಮಾರು 70 ಎಕರೆ ಸಾರ್ವಜನಿಕ ಆಸ್ತಿಯನ್ನು ಕೈ ಬಿಟ್ಟು ಕಡಿಮೆ ಬೆಲೆಯಲ್ಲಿ ಕಂಪನಿಗಳಿಗೆ ಕಡಿಮೆ ಬೆಲೆ ನೀಡಿದ್ದಾರೆ ಎನ್ನಲಾಗಿದೆ . ಈ ಕುರಿತು ವಾಸುದೇವ ರೆಡ್ಡಿ ಎಂಬುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.
ದೂರನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಡಿವೈಎಸ್‌ಪಿಗೆ ಆದೇಶ ನೀಡಿದೆ.