
ಬೆಂಗಳೂರು: ದಲಿತ ಮುಖ್ಯಮಂತ್ರಿ ಬೇಡಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಹೊರಗಿನವರ ಆಗ್ರಹಕ್ಕೆ ನಾನು ಉತ್ತರ ನೀಡುವುದಿಲ್ಲ ಎಂದು ಸಿಎಂ
ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಟಾಂಗ್ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ. ದಲಿತ ಮುಖ್ಯಮಂತ್ರಿ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಹೀಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವೂ ಇಲ್ಲ ಎಂದ ಅವರು, ಈ ಬೇಡಿಕೆಗೆ ಪರಮೇಶ್ವರ ಅವರ
ಕುಮ್ಮಕ್ಕು ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ನಾನೇನೂ ಹೇಳುವುದಿಲ್ಲ ಎಂದರು.
Advertisement