'ಕೈ' 'ಹೈ' 'ಸ್ಪೈ'

ಕೊನೆಗೂ ರಾಜ್ಯ ಸರ್ಕಾರದ ಬಗ್ಗೆ ನಿಗಾವಹಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಸಚಿವರ..
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ (ಸಂಗ್ರಹ ಚಿತ್ರ)
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ (ಸಂಗ್ರಹ ಚಿತ್ರ)
Updated on

ರಾಜ್ಯ ಸರ್ಕಾರದ ಮೇಲೆ ನಿಗಾ ವಹಿಸಲು ಹೈಕಮಾಂಡ್ ಸಿದ್ಧತೆ
ಸಚಿವರು, ಶಾಸಕರ ಕಾರ್ಯ ನಿರ್ವಹಣೆ ವಿವರ ಕೋರಿದ ವರಿಷ್ಠರು
ಕೆಪಿಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾಹಿತಿ ನೀಡಿದ ಪರಮೇಶ್ವರ

ಬೆಂಗಳೂರು:
ಕೊನೆಗೂ ರಾಜ್ಯ ಸರ್ಕಾರದ ಬಗ್ಗೆ ನಿಗಾವಹಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಸಚಿವರ ಕಾರ್ಯ ನಿರ್ವಹಣೆ ಬಗ್ಗೆ ಗುಪ್ತ ವರದಿ ನೀಡುವಂತೆ ರಾಜ್ಯ ಘಟಕವನ್ನು ಕೋರಿದೆ.

ವರದಿಯಲ್ಲಿ ಸಚಿವರು ಮತ್ತು ಶಾಸಕರ ಕಾರ್ಯ ನಿರ್ವಹಣೆ ಜತೆಗೆ ಕಾಂಗ್ರೆಸ್ ಹಿನ್ನಡೆಗೆ ಕಾರಣಗಳೇನು ಮತ್ತು 21ನೇ ಶತಮಾನದಲ್ಲಿ ಕಾಂಗ್ರೆಸ್ ಸಿದ್ಧಾಂತದಲ್ಲಿ ಬದಲಾಗಬೇಕಾದ ಅಂಶಗಳೇನು ಎಂಬ ಬಗ್ಗೆ ವರದಿಯಲ್ಲಿ ನಮೂದಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಘಟಕಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರೇ ಈ ವಿಷಯ ಪ್ರಕಟಿಸಿದ್ದು, ಪಕ್ಷದ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಹಿರಿಯ ಜತೆ ಚರ್ಚೆ
ದೇಶದ ಎಲ್ಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಹಿರಿಯ ಮುಖಂಡರ ಜತೆ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣಗಳನ್ನು ಹುಡುಕಲಾಗುತ್ತಿದೆ. ಪಕ್ಷದಲ್ಲಿ ಬದಲಾವಣೆ ಅಗತ್ಯವಾ ಎಂದು ಮಾಹಿತಿ ಕೇಳಿದೆ. ಇದ ಜತೆಗೆ ರಾಜ್ಯ ಸರ್ಕಾರದ ಸಚಿವರು, ಶಾಸಕರಿಗೆ ಉತ್ತರದಾಯಿತ್ವ ಇರಬೇಕು ಎಂದು ಸೋನಿಯಾ ಸೂಚಿಸಿದ್ದು, ಈ ಎಲ್ಲ ಅಂಶ ಆಧರಿಸಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ವರದಿ ಕೇಳಲಾಗಿದೆ ಎಂದು ಹೇಳಿದರು.

ಫೆಬ್ರವರಿ ಅಂತ್ಯದ ವೇಳೆಗೆ ಹೈಕಮಾಂಡ್ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವರದಿ ಸಿದ್ಧಪಡಿಸಬೇಕು. ಸೀಲು ಮಾಡಿದ ಲಕೋಟೆಯಲ್ಲಿ ಈ ವರದಿಯನ್ನು ಪ್ರದೇಶ ಕಾಂಗ್ರೆಸ್ ಸಮಿತಿಗೆ ನೀಡಬೇಕಾಗಿದ್ದು, ನಂತರ ಇದನ್ನು ಎಐಸಿಸಿಗೆ ರವಾನೆ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com