ಉದ್ಯೋಗ ಸೃಷ್ಟಿಯಲ್ಲಿ ರಾಜ್ಯ ಹಿಂದೆ: ಶೆಟ್ಟರ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಒಂದೇ ಒಂದು ಹೊಸ ಉದ್ಯೋಗ...
ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್
ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್
Updated on: 

ಗದಗ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಒಂದೇ ಒಂದು ಹೊಸ ಉದ್ಯೋಗ ಸೃಷ್ಟಿ ಆಗಿಲ್ಲ, ಭ್ರಷ್ಟಾಚಾರ ನಡೆಸುವುದೇ ಕಾಂಗ್ರೆಸ್‌ನವರಿಗೆ ದೊಡ್ಡ ಉದ್ಯೋಗವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು.

ಅವರು ಶನಿವಾರ ಗದಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆಯಾಗುವ ನಿಟ್ಟಿನಲ್ಲಿ ಸರ್ಕಾರ ಮಾಡಿದ ನಿರ್ಲಕ್ಷ್ಯ ಧೋರಣೆಯಿಂದ ಧಾರವಾಡಕ್ಕೆ ಬರಬೇಕಾಗಿದ್ದ ಹೀರೋ ಕಂಪನಿ ಇಂದು ಆಂಧ್ರಪ್ರದೇಶದ ಪಾಲಾಯಿತು.

ರಾಜ್ಯದಲ್ಲಿ ಯಾವುದೇ ನೂತನ ಕೈಗಾರಿಕೆಗಳು ಬಂದಿಲ್ಲ, ಬಂಡವಾಳ ಹೂಡಿಕೆ ಮಾಡಲು ಸೂಕ್ತವಾದ ವಾತಾವರಣ ನಿರ್ಮಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com