
ಮೈಸೂರು: ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತೀಯ ಜನತಾ ಪಕ್ಷ(ಬಿಜೆಪಿ)ದವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಗುರುವಾರ ಕಿಡಿಕಾರಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ ಡಿನೋಟಿಫಿಕೇಷನ್ ಆಗಿರುವುದು. ನನ್ನ ಅವಧಿಯಲ್ಲಿ ರಿಮಾಡಿಫಿಕೇಷನ್ ಆಗಿದೆ, ಡಿನೋಟಿಫಿಕೇಷನ್ ಆಗಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.
ಕೆಂಪಯ್ಯ ಆಯೋಗ ರಚಿಸಿರೋದೆ ದೂರು ನೀಡುವುದಕ್ಕೆ, ದೂರುಗಳು, ದಾಖಲೆಗಳು ಇದ್ದರೆ ಅದನ್ನು ಆಯೋಗಕ್ಕೆ ನೀಡಲಿ. ಸುಳ್ಳು ಆರೋಪ ಮಾಡುವುದರಿಂದ ಏನು ಪ್ರಯೋಜನವಾಗಲ್ಲ ಎಂದು ಅವರು ತಿಳಿಸಿದ್ದಾರೆ.
Advertisement