ಬೆಳಗಾವಿ ಅಧಿವೇಶನ ಮುಗಿಸಿ ಹೊರಬರುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಳಗಾವಿ ಅಧಿವೇಶನ ಮುಗಿಸಿ ಹೊರಬರುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ

ಅವಿಶ್ವಾಸಕ್ಕೆ ಹೆದರಲ್ಲ:ಸಿಎಂ

ನಾನು ಸಾಮಾಜಿಕ ನ್ಯಾಯ ಮತ್ತು ಅಹಿಂದ ಪರವಾಗಿರುವುದನ್ನು ಸಹಿಸಲಾಗದೇ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿವೆ ಎಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ...

ಬೆಳಗಾವಿ(ಸುವರ್ಣ ವಿಧಾನಸೌಧ): ನಾನು ಸಾಮಾಜಿಕ ನ್ಯಾಯ ಮತ್ತು ಅಹಿಂದ ಪರವಾಗಿರುವುದನ್ನು ಸಹಿಸಲಾಗದೇ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿವೆ ಎಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ತಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬೆಳಗಾವಿ ಅಧಿವೇಶನ ಕಲಾಪ ಮುಕ್ತಾಯಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಪಕ್ಷಗಳಿಗೆ ಅವಿಶ್ವಾಸ ನಿರ್ಣಯ ಮಂಡನೆಗೆ ಮಹತ್ವ ಮತ್ತು ಉದ್ದೇಶವೇ ಗೊತ್ತಿಲ್ಲ.ಬಿಜೆಪಿ, ಜೆಡಿಎಸ್ ಮತ್ತು ನನ್ನ ನಡುವೆ ಸೈದ್ಧಾಂತಿಕ ಭೇದವಿದೆ.ನಾನು ಅಹಿಂದ ಪರವಾಗಿದ್ದೇನೆಂಬ ಕಾರಣಕ್ಕೆ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿರುವುದನ್ನು ಸಹಿಸದೇ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ನಾನು ಇದಕ್ಕೆ ಹೆದರುವುದಿಲ್ಲ ಎಂದರು.

ಡಾ.ಡಿ.ಎಂ. ನಂಜುಂಡಪ್ಪ ವರದಿ ಚರ್ಚೆಗೆ ಬೆಂಗಳೂರಿನಲ್ಲಿ ಸರ್ಕಾರ ಉತ್ತರ ನೀಡುತ್ತದೆ. ಉತ್ತರ ಕರ್ನಾಟಕ ಭಾಗದ ಎಲ್ಲ ಸಮಸ್ಯೆಗಳಿಗೆ ಒಮ್ಮೆಲೇ ಪರಿಹಾರ ನೀಡುವುದಕ್ಕೆ ಸಾಧ್ಯವಿಲ್ಲ. ಆತ್ಮಹತ್ಯೆ ಮಾಡಿಕೊಳ್ಳದಂತೆ ನಾನು ರೈತರಲ್ಲಿ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ನನಗೆ ತೃಪ್ತಿ ನೀಡಿದೆ. ಪ್ರಧಾನ ಪ್ರತಿಪಕ್ಷವಾಗಿ ಹಲವು ವಿಚಾರದಲ್ಲಿ ಸರ್ಕಾರದ ಕಣ್ಣು ತೆರೆಸಿದ್ದೇವೆ. ರೈತರ ಕಬ್ಬಿನ ಬಾಕಿ ಬಿಡುಗಡೆ ಮಾಡಿಸುವಲ್ಲಿ ಸಫಲರಾಗಿದ್ದೇವೆ.
-ಜಗದೀಶ್ ಶೆಟ್ಟರ್, ಪ್ರತಿಪಕ್ಷ ನಾಯಕ

ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭೇದ ಬೇಡ. ಅಧಿವೇಶನದಲ್ಲಿ ಉತ್ತಮ ಚರ್ಚೆ ನಡೆದಿದೆ. ಬೆಳಗಾವಿಯಲ್ಲಿ ಹೆಚ್ಚು ದಿನ ಕಲಾಪ ನಡೆಸುವಂತಾಗಬೇಕು. ಶಾಸಕರು ಗೈರು ಹಾಜರಾಗುವುದಕ್ಕೆ ನಾನು ಈಗಾಗಲೇ ಎಚ್ಚರಿಕೆ ನೀಡಿದ್ದೇನೆ. ಇದು ಶಾಸನಸಭೆ. ಕ್ಷೇತ್ರದ ಸಮಸ್ಯೆ ಬಗ್ಗೆ ಇಲ್ಲಲ್ಲದೇ ಇನ್ನೆಲ್ಲಿ ಚರ್ಚೆ ನಡೆಸುವುದಕ್ಕೆ ಸಾಧ್ಯ?
-ಕಾಗೋಡು ತಿಮ್ಮಪ್ಪ, ವಿಧಾನಸಭಾಧ್ಯಕ್ಷ

Related Stories

No stories found.

Advertisement

X
Kannada Prabha
www.kannadaprabha.com