ನಾಳೆ ಬೆಂಗಳೂರಿಗೆ ರಾಹುಲ್ ಗಾಂಧಿ

ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ಬೆಂಗಳೂರು: ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ರೈತರು ಆತ್ಮಹತ್ಯೆಗೆ ಒಳಗಾದ ದೇಶದ ಇತರ ರಾಜ್ಯಗಳಿಗೂ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕಕ್ಕೂ ಭೇಟಿ ನೀಡುತ್ತಿರುವುದು ಹೆಚ್ಚು ಮಹತ್ವ ಪಡೆದುಕೊಂಡಿದೆ.

ದೆಹಲಿಯಿಂದ ನಾಳೆ ಬೆಳಗ್ಗೆ ನಗರಕ್ಕೆ ಆಗಮಿಸುವ ರಾಹುಲ್, ನೇರವಾಗಿ ಕುಮಾರಕೃಪಕ್ಕೆ ಅತಿಥಿಗೃಹಕ್ಕೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಜತೆ ರೈತರ ಆತ್ಮಹತ್ಯೆ ಬಗ್ಗೆ ಚರ್ಚಿಸಲಿದ್ದಾರೆ. ಚರ್ಚೆಯ ಬಳಿಕ ಅನಂತಪುರಕ್ಕೆ ತೆರಳಿ ಖಾಸಗಿ ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಜುಲೈ 24 ಹಾಗೂ 25ರಂದು ರಾಹುಲ್ ಗಾಂಧಿ ಅವರು ಮಂಡ್ಯ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಿಬ್ಬರ ನಿವಾಸಕ್ಕೆ ತೆರಳಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com