ನೈತಿಕ ಹೊಣೆ ಹೊತ್ತು ಸಿಎಂ ರಾಜಿನಾಮೆ ನೀಡಲಿ: ಶೆಟ್ಟರ್

ಒಂದೂವರೆ ವರ್ಷದಲ್ಲಿ ರಾಜ್ಯ ದಲ್ಲಿ 130ಕ್ಕೂ ಹೆಚ್ಚು ರೈತರು ಸಾಲ ಬಾಧೆ ತಾಳ ಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದು, ನೈತಿಕ ಹೊಣೆ ಹೊತ್ತು...
ಬಾಗಲಕೋಟೆಯಲ್ಲಿ ರೈತರ ಕುಟುಂಬದವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ (ಕೃಪೆ: ಕೆಪಿಎನ್)
ಬಾಗಲಕೋಟೆಯಲ್ಲಿ ರೈತರ ಕುಟುಂಬದವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ (ಕೃಪೆ: ಕೆಪಿಎನ್)
Updated on: 

ಮುಧೋಳ: ಒಂದೂವರೆ ವರ್ಷದಲ್ಲಿ ರಾಜ್ಯ ದಲ್ಲಿ 130ಕ್ಕೂ ಹೆಚ್ಚು ರೈತರು ಸಾಲ ಬಾಧೆ ತಾಳ ಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ವಿಧಾನಸಭೆ ವಿಸರ್ಜಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಒತ್ತಾಯಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈಚೆಗೆ ಬೆಂಗಳೂರಿಗೆ ಭೇಟಿ ನೀಡಿ ಹಾಗೇ ವಾಪಸ್ ಆಗಿದ್ದಾರೆ. ಆದರೆ ರಾಜ್ಯದಲ್ಲಿ ನೂರಾರು ಜನ ರೈತರು ಆತ್ಮಹತ್ಯೆ ಮಾಡಿಕೊಂಡರೂ ರೈತರ ಮನೆಗೆ ಭೇಟಿ ನೀಡದೆ
ಹಾಗೆಯೇ ಹೋಗಿರುವುದನ್ನು ಗಮನಿಸಿದರೆ ಕಾಂಗ್ರೆಸ್ ನಾಯಕರಿಗೆ ರೈತರ ಆತ್ಮಹತ್ಯೆ ಕಣ್ಣಿಗೆ ಕಾಣಿಸುತ್ತಿಲ್ಲವೆನಿಸುತ್ತದೆ ಎಂದು ಟೀಕಿಸಿದರು. ರಾಜ್ಯದಲ್ಲಿ ಎಷ್ಟು ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂಬುದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರೆ ಕೇಂದ್ರ ಸರ್ಕಾರಕ್ಕೆ ತಾವು ಒತ್ತಾಯಿಸಿ, ರಾಜ್ಯಕ್ಕೆ ಹೆಚ್ಚಿನ ಪರಿಹಾರ ಒದಗಿ ಸಲು ಪ್ರಯಚ್ನಿಸುವುದಾಗಿ ಶೆಟ್ಟರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಾಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೈರುಹಾಜರ ಆಗುತ್ತಾರೆ. ಇದರಿಂದ ರಾಜ್ಯದ
ಸಮಸ್ಯೆಗಳ ಕುರಿತು ಪ್ರಧಾನಿಯವರ ಜತೆ ಚರ್ಚಿಸದೆ ಹಾಗೆಯೇ ಉಳಿಯುತ್ತಿವೆ. ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತ ಕುಟುಂಬಗಳಿಗೆ ಕೇಂದ್ರದಿಂದ ಹೆಚ್ಚಿನ ನೆರವು
ಪಡೆಯಲು ಸರ್ವಪಕ್ಷ ನಿಯೋಗ ಹೊರಡಲು ಸರ್ಕಾರ ಸಿದಟಛಿವಾದರೆ ತಾವುಗಳು ತಮ್ಮ ಜತೆಗೆ ಬರಲು ಸಿದ್ಧರಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com