
ಬೆಂಗಳೂರು: ಒಂದಂಕಿ ಲಾಟರಿ ಹಗರಣದಲ್ಲಿ ಇನ್ನೊಬ್ಬ ಹಿರಿಯ ಅಧಿಕಾರಿ ಭಾಗಿಯಾಗಿರುವ ಬಗ್ಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಸುಳಿವು ನೀಡಿದ್ದಾರೆ. ಸಚಿವ ಸಂಪುಟ ಸಭೆ ಆರಂಭ ವಾಗುವುದಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದಲ್ಲಿ ಇನ್ನೊಬ್ಬ ಅಧಿಕಾರಿ ಭಾಗಿಯಾಗಿರುವ ಬಗ್ಗೆ ಸಿಐಡಿ ಐಜಿ ವರದಿ ನೀಡಿದ್ದಾರೆ. ಹೀಗಾಗಿ ಅವರನ್ನೂ ಅಮಾನತು ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ಆದರೆ ಅಧಿಕಾರಿಯ ಹೆಸರನ್ನು ಬಹಿರಂಗಗೊಳಿಸಿಲ್ಲ. ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ನೀರಿನಿಂದ ಹೊರಕ್ಕೆ ಬಿಟ್ಟ ಮೀನಿನಂತಾಗಿದ್ದಾರೆ. ನಾವು ರಾಜಿನಾಮೆ ನೀಡಿದರೆ ತಾವು ಅಧಿಕಾರಕ್ಕೆ ಬರಬಹುದು ಎಂದು ಭಾವಿಸಿದ್ದಾರೆ. ಅದು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು. ಹಗರಣದಲ್ಲಿ ಭಾಗಿಯಾಗಿರುವುದು ಐಜಿಪಿ ದರ್ಜೆಯ ಅಧಿಕಾರಿ ಆಗಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
Advertisement