

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹೂಡುತ್ತಿರುವ ಎಸ್‍ಡಿಪಿಐ ಸಂಘಟನೆಗೆ ಯಾರು ಹಣ ನೀಡುತ್ತಿದ್ದಾರೆಂದು ತನಿಖೆಯಾಗಲಿ, ಕೇಂದ್ರದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಸುವೊಮೋಟೋ ಪ್ರಕರಣ ದಾಖಲಿಸಿಕೊಳ್ಳಲಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಬಿಜೆಪಿಗೆ ಸವಾಲೆಸೆದಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಹಾಗೂ ಶಿವ ಮೊಗ್ಗದಲ್ಲಾದ ಗಲಭೆಗಳಲ್ಲಿ ಸಿಕ್ಕಿಕೊಂಡ ಸಾವಿರಕ್ಕಿಂತಲೂ ಅಧಿಕ ಮಂದಿ ಹಿಂದೂ-ಮುಸ್ಲಿಂ ಸಹೋದರರ ಪ್ರಕರಣವನ್ನು ಕ್ಯಾಬಿನೆಟ್‍ನಲ್ಲಿ ಹಿಂದಕ್ಕೆ ಪಡೆದಿದ್ದನ್ನು ಬಿಜೆಪಿಯು ರಾಜಕೀಯವಾಗಿ ಬಳಸಿಕೊಂಡು ಜನರ ಮಧ್ಯೆ ಗೊಂದಲ ಸೃಷ್ಟಿಸುತ್ತಿರುವುದು ಶೋಭೆ ತರುವಂತ್ತದ್ದಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಎಸ್‍ಡಿಪಿಐ ಅಭ್ಯರ್ಥಿಗಳನ್ನು ಹಾಕಲು ಕಾರಣ ಎಂಬುದು ಜನರಿಗೆ ಗೊತ್ತಾಗಲಿ.
ರಾಷ್ಟ್ರದ್ರೋಹಿಗಳೆಂದು ಕೂಗುವ ಬಿಜೆಪಿಯವರೊಂದಿಗೆ ಸಭೆ ನಡೆಸಿದ್ದಾರೆಂಬುದು ಗೊತ್ತಾಗಬೇಕಿದೆ. ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಕೈಬಿಟ್ಟ ಪ್ರಕರಣವನ್ನು ರಾಜಕೀಯಗೊಳಿಸುವ ಕೆಲಸ ನಡೆಯುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ, ಬಿಜೆಪಿಯವರ ಸತ್ಯ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದರು.
ಕೆಪಿಎನ್‍ಎಸ್ ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ
ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿದಾರರೊಬ್ಬರಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣಕ್ಕೆ ಇಬ್ಬರು ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಸಾರ್ವಜನಿಕ ಮಾಹಿತಿ ಹಾಗೂ ಸಹಾಯಕ ಕಂದಾಯ ಅಧಿಕಾರಿ ಶ್ರೀಧರ್, ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಬಿ.ಸಿ.ಭಾರತಿ ಅವರಿಗೆ ತಲಾ ರು.10 ಸಾವಿರ ದಂಡ ವಿಧಿಸಿದೆ. ಅಲ್ಲದೆ ಅರ್ಜಿದಾರರು ಕೋರಿರುವ ಮಾಹಿತಿಯನ್ನು 30 ದಿನದೊಳಗೆ ಉಚಿತ ನೊಂದಾಯಿತ ಅಂಚೆ ಸ್ವೀಕೃತಿ ಮುಖಾಂತರ ಸಲ್ಲಿಸುವಂತೆ ಸೂಚಿಸಿ ಜೂ.23ಕ್ಕೆ ವಿಚಾರಣೆ ಮುಂದೂಡಿದೆ.