
ಬೆಂಗಳೂರು: ನಕಲಿ ಪದವಿ ಪ್ರಮಾಣ ಪತ್ರ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಪಾತ್ರ ಇಲ್ಲ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಮರ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿಲ್ಲ, ದೆಹಲಿ ಪೊಲೀಸರು ಪ್ರಕರಣವನ್ನು ಕೂಲಂಕೂಷವಾಗಿ ತನಿಖೆ ನಡೆಸಿದ ಬಳಿಕ ತೋಮರನ್ನು ಬಂಧಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ದಿಢೀರ್ ಬಂಧಸಿದ್ದ ದೆಹಲಿ ಪೊಲೀಸ್ ಕ್ರಮದ ಬಗ್ಗೆ ಆಪ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಕೇಂದ್ರ ಸರ್ಕಾರ ದೆಹಲಿ ಸರ್ಕಾರದ ಮೇಲೆ ಒತ್ತಡ ಹೇರುವ ಕುತಂತ್ರ ನಡೆಸಿದೆ ಎಂದು ಆರೋಪಿಸಿತ್ತು.
Advertisement