ಬಿಬಿಎಂಪಿ ಚುನಾವಣೆ: ಹಳೆ ಮೀಸಲಿಗೆ ಕಾಂಗ್ರೆಸ್ ಸಮ್ಮತಿ

ಬಿಬಿಎಂಪಿಗೆ ಹಳೆ ಮೀಸಲು ಪಟ್ಟಿ ಪ್ರಕಾರವೇ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ...
ಕಾಂಗ್ರೆಸ್
ಕಾಂಗ್ರೆಸ್

ಬೆಂಗಳೂರು: ಬಿಬಿಎಂಪಿಗೆ ಹಳೆ ಮೀಸಲು ಪಟ್ಟಿ ಪ್ರಕಾರವೇ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾರೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವುದು ಅನಿವಾರ್ಯ. ಸದ್ಯಕ್ಕೆ ಹಳೆ ಮೀಸಲು ಪಟ್ಟಿಯಂತೆ ಚುನಾವಣೆ ನಡೆಸಿ, ಕಾನೂನು ಪ್ರಕ್ರಿಯೆ ಬಗ್ಗೆ ಮುಂದೆ ನಿರ್ಧರಿಸಬಹುದು ಎನ್ನುವ ತೀರ್ಮಾನಕ್ಕೆ ಉಭಯರೂ ಬಂದಿದ್ದಾರೆ.

ಮುಖ್ಯಮಂತ್ರಿ ಮಂಗಳವಾರ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದಿಂದ ಹಿಂದಿರುಗಿದ ಬಳಿಕ ಇಬ್ಬರೂ ಇನ್ನೊಮ್ಮೆ ಚರ್ಚೆ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com