ಸಿಎಂ ಮೊಸಳೆ ಕಣ್ಣೀರು: ಶೆಟ್ಟರ್ ವ್ಯಂಗ್ಯ

ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿದೆ ಎನ್ನುತ್ತಿರುವಾಗ ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸುವ ನಾಟಕಕ್ಕೆ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ...
ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್
ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿದೆ ಎನ್ನುತ್ತಿರುವಾಗ ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸುವ ನಾಟಕಕ್ಕೆ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಾವಿರರು ಕೋಟಿ ಪಾವತಿಸಬೇಕಿದೆ. ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ಹಣ ನೀಡುವಂತೆ ಒತ್ತಾಯಿಸಿದರೂ ಸುಮ್ಮನೆ ಕುಳಿತಿದ್ದ ಸರ್ಕಾರ ಇದೀಗ ಅಧಿವೇಶನ ಹೊಸ್ತಿಲಲ್ಲ ಕಾಟಾಚಾರಕ್ಕೆ ಎಂಬಂತೆ ಸಭೆ ಕರೆದಿದೆ. ಈ ಸಭೆಯಿಂದ ಏನೂ ಪ್ರಯೋಜನವಿಲ್ಲ. ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಬೇಕಾಗುತ್ತದೆ ಎನ್ನುವ ಕಾರಣಕ್ಕಾಗಿಯೇ 24ರಂದು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ ಎಂದು ಶೆಟ್ಟರ್ ಹರಿಹಾಯ್ದಿದ್ದಾರೆ.

ಸೇಡಿನ ರಾಜಕಾರಣ:
ರಾಜ್ಯ ಸರ್ಕಾರ ಬಿಜೆಪಿ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸುತ್ತ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಶೆಟ್ಟರ್ ಆರೋಪಿಸಿದರು. ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಹೋರಾಟ ಕೈಗೊಂಡರೆ ಸಾಕು, ಸರ್ಕಾರ ಅಧಿಕಾರ ಬಲದಿಂದ ಹೋರಾಟ ಹತ್ತಿಕುವ ಪ್ರಯತ್ನ ಮಾಡುತ್ತಿದೆ. ಸಿಬಿಐ, ಎಸ್‍ಐಟಿ ಹೆಸರಲ್ಲಿ ಶಾಸಕ ಆನಂದ ಸಿಂಗ್ ಅವರನ್ನು ಬಂಧಿಸಲಾಗುತ್ತಿದೆ.

 ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದಟಛಿ ದೂರು ದಾಖಲಿಸಲಾಗಿದೆ. ಯಲ್ಲಾಲಿಂಗನ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟಿಸಿದರೆ ಬಿಜೆಪಿಯ ಮಾಜಿ ಸಂಸದ ವಿರೂಪಾಕ್ಷ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನ್ಮೂಲಕ ಬಿಜೆಪಿಯನ್ನು ಬೆದರಿಸುವ ಕೀಳು ರಾಜಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಇಳಿದಿದೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com