

ಮೈಸೂರು : ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೆ ಶರಣಾಗುವುದು ಸಮಸ್ಯೆಗೆ ಪರಿಹಾರವಲ್ಲ, ದಯವಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿಲ್ಲಿಸಿ ಎಂದು ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಸಾಲದ ಹೊರೆಯಿಂದ ಬಳಲುತ್ತಿರುವ ರೈತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ರೈತರ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ಎಲ್ಲ ಸಹಾಯಗಳನ್ನೂ ಮಾಡಲು ಸಿದ್ಧವಿದೆ.
ಮಾತ್ರವಲ್ಲದೆ ಸಕ್ಕರೆ ಕಾರ್ಖಾನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿರುವ ಸಕ್ಕರೆಯನ್ನು ಜಪ್ತಿ ಮಾಡಿಕೊಂಡು, ಹರಾಜು ಹಾಕಿ, ರೈತರಿಗೆ ಸಿಗಬೇಕಾಗಿರುವ ಹಣವನ್ನು ಕೊಡಿಸಲು ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.