
ಬಂಗಾರಪೇಟೆ: ಜುಲೈ 28ರಂದು ನಡೆಯಲಿರುವ ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಮಾನಸಿಕವಾಗಿ ಸಿದ್ಧವಾಗಿದೆ ಮತ್ತು ಚುನಾವಣೆಯಲ್ಲಿ ಸ್ಪಷ್ಟವಾದ ಬಹುಮತ ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಳೆದ ಎರಡು ವರ್ಷಗಳ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಹಾಗೂ ಜನಪರ ಆಡಳಿತದಿಂದ ಜನರು ಮತ್ತೆ ಕಾಂಗ್ರೆಸ್ ಕೈಗೆ ಅಧಿಕಾರ ನೀಡುವುದು ಖಚಿತ ಎಂದರು.
ಬಿಬಿಎಂಪಿ ವಿಭಜನೆಯಿಂದ ಪಕ್ಷಕ್ಕೆ ಹಾನಿಯಾಗುವುದಿಲ್ಲವೆ ಎಂಬ ಪ್ರಶ್ನೆಗೆ, ಸಾಕಷ್ಟು ಆದಾಯವಿದ್ದರೂ ಅದನ್ನು ವಸೂಲಿಮಾಡಲು ಅಧಿಕಾರಿಗಳಿಂದ ಸಾಧ್ಯವಾಗದ ಕಾರಣ ಹಾಗೂ ಉತ್ತಮ ಆಡಳಿತ ನೀಡುವ ದೃಷ್ಟಿಯಿಂದ ವಿಭಜನೆ ಮಾಡಲಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವಿಲ್ಲ ಎಂದು ಸಮರ್ಥಿಸಿಕೊಂಡರು
Advertisement