ಮರಿತಿಬ್ಬೇಗೌಡ ಸಭಾತ್ಯಾಗ

ತಮ್ಮ ಪ್ರಶ್ನೆಗೆ ಸಮರ್ಪಕ ಉತ್ತರ ದೊರೆತಿಲ್ಲ ಎಂದು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡಿದರು...
ವಿಧಾನಸಭೆ ಅಧಿವೇಶನ ಬೆಳಗಾವಿ
ವಿಧಾನಸಭೆ ಅಧಿವೇಶನ ಬೆಳಗಾವಿ
Updated on

ವಿಧಾನ ಪರಿಷತ್ತು: ತಮ್ಮ ಪ್ರಶ್ನೆಗೆ ಸಮರ್ಪಕ ಉತ್ತರ ದೊರೆತಿಲ್ಲ ಎಂದು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಸಭಾತ್ಯಾಗ ಮಾಡಿದರು.

ವಿಧಾನ ಪರಿಷತ್ತಿನಲ್ಲಿ ಕಬ್ಬು ಬೆಳೆಗಾರರ ಕುರಿತಾಗಿ ಪ್ರಶ್ನೆ ಕೇಳಿದ ಮರಿತಿಬ್ಬೇಗೌಡ, ಕಬ್ಬು ಬೆಳೆಗಾರರಿಗೆ ಯಾವಾಗ ಹಣ ಕೊಡುತ್ತೀರಿ. ಎಷ್ಟು ಕಂಪನಿಗಳು ರೈತರ ಹಣವನ್ನು ಬಾಕಿ ಉಳಿಸಿಕೊಂಡಿವೆ ಎಂದು ಪ್ರಶ್ನಿಸಿದರು.

ಸಕ್ಕರೆ ಸಚಿವ ಮಹದೇವ ಪ್ರಸಾದ್ ಇದಕ್ಕೆ ಪ್ರತಿಕ್ರಿಯಿಸಿ ಕಬ್ಬು ಬೆಳೆಗಾರರ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯುತ್ತಿದೆ. ಇದಕ್ಕೆ ಸರ್ಕಾರ ಉತ್ತರ ನೀಡುವ ಸಂದರ್ಭದಲ್ಲಿ ಈ ಪ್ರಶ್ನೆಗೂ ಉತ್ತರ ದೊರೆಯಲಿದೆ ಎಂದರು. ಆಗ ಸಭಾಪತಿ ಜಯಮಾಲಾ ಅವರಿಗೆ ಪ್ರಶ್ನೆ ಕೇಳಲು ಸೂಚಿಸಿದರು. ಇದರಿಂದ ಕೆರಳಿದ ಮರಿತಿಬ್ಬೇಗೌಡ ತಮ್ಮ ಪ್ರಶ್ನೆಗೆ ಸಮರ್ಪಕ ಉತ್ತರ ದೊರೆತಿಲ್ಲ. ಇನ್ನೂ ಪ್ರಶ್ನೆ ಕೇಳಬೇಕಾಗಿದೆ ಎಂದರು. ಆದರೂ ಇದಕ್ಕೆ ಅವಕಾಶ ಸಿಗದಿದ್ದಾಗ ಕೆರಳಿದ ಅವರು ಸರ್ಕಾರಕ್ಕೆ ಧಿಕ್ಕಾರ ಎನ್ನುತ್ತ ಸಭೆಯಿಂದ ಹೊರನಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com