ಸಿದ್ದು, ಪರಮ್ ವಿರುದ್ಧ ಹೈಕಮಾಂಡ್ ಗೆ ಆಕ್ಷೇಪ

ನಿಗಮ ಮಂಡಳಿ ನಿರ್ದೇಶಕರು ಮತ್ತು ಸದಸ್ಯರ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ರಾಜ್ಯದ ಕಾಂಗ್ರೆಸ್ ಸಂಸದರು ಹೈಕಮಾಂಡ್ ಗೆ ಆಕ್ಷೇಪ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ನಿಗಮ ಮಂಡಳಿ ನಿರ್ದೇಶಕರು ಮತ್ತು ಸದಸ್ಯರ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ರಾಜ್ಯದ ಕಾಂಗ್ರೆಸ್ ಸಂಸದರು ಹೈಕಮಾಂಡ್ ಗೆ ಆಕ್ಷೇಪ ಸಲ್ಲಿಸಿದ್ದಾರೆ.

ತಮ್ಮ ತಮ್ಮ ಹಮ್ಮಿನ ಕಾರಣ ನೀಡಿ ಇವರಿಬ್ಬರು ಈ ಸಂಬಂಧ ಸಭೆ ನಡೆಸಿ ಪಟ್ಟಿಗೆ ಅಂತಿಮ ಸ್ಪರ್ಶ ನೀಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದ್ದರೂ ಕಾರ್ಯಕರ್ತರಿಗೆ ಅಧಿಕಾರ ಸಿಕ್ಕಿಲ್ಲ. ನಮ್ಮ ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

ಆದರೆ, ನೇಮಕ ಪ್ರಕ್ರಿಯೆ ಪೂರ್ಣಗೊಳಿಸಬೇಕಾದ ಸಿದ್ದರಾಮಯ್ಯ, ಪರಮೇಶ್ವರ ತಮ್ಮದೇ ಆದ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ ಎಂದು ಸಂಸಂದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಹೈಕಮಾಂಡ್ ಇಬ್ಬರಿಗೆ ಸೂಚನೆ ನೀಡಬೇಕು. ಇಲ್ಲವಾದರೆ ವರಿಷ್ಠರೇ ಪಟ್ಟಿ ತಯಾರಿಸಿ ಪ್ರಕಟಿಸಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com