ಮುಂದುವರೆದ ಪ್ರತಿಪಕ್ಷಗಳ ಧರಣಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಮೂರನೆ ದಿನವೂ..
ವಿಧಾನಮಂಡಲದಲ್ಲಿ ಪ್ರತಿಪಕ್ಷಗಳ ಧರಣಿ
ವಿಧಾನಮಂಡಲದಲ್ಲಿ ಪ್ರತಿಪಕ್ಷಗಳ ಧರಣಿ
Updated on: 

ಬೆಂಗಳೂರು: ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಮೂರನೆ ದಿನವೂ ಪ್ರತಿಪಕ್ಷಗಳು ಧರಣಿಯನ್ನು ಮುಂದುವರೆಸಿದ ಹಿನ್ನಲೆಯಲ್ಲಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟು ಹಿಡಿದಿರುವ ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಬುಧವಾರ ಅಹೋರಾತ್ರಿ ಧರಣಿ ನಡೆಸಿದವು.

ಆದರೆ, ಪ್ರತಿಪಕ್ಷಗಳ ಹೋರಾಟಕ್ಕೆ ಜಗ್ಗದ ಸರ್ಕಾರ ಸಿಐಡಿ ತನಿಖೆ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ಗುರುವಾರವೂ ಕೂಡ ಸದನದ ಬಾವಿಯೊಳಗೆ ಇಳಿದು ಕೈಗೆ ಕಪ್ಪು ಪಟ್ಟಿಕೊಂಡು ಧರಣಿ ನಡೆಸಿದವು.

ಪ್ರತಿಭಟನೆಯಿಂದಾಗಿ ಸದನದಲಲಿ ಗದ್ದಲ ಹೆಚ್ಚಾದ ಹಿನ್ನಲೆಯಲ್ಲಿ ಸ್ಪೀಕರ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com