ಗ್ರಾಪಂ ಚುನಾವಣೆಗೆ ಕೈ ಸಿದ್ಧ

ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಕಾಂಗ್ರೆಸ್ ಎಲ್ಲ ರೀತಿಯಲ್ಲಿಯೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಕಾಂಗ್ರೆಸ್ ಎಲ್ಲ ರೀತಿಯಲ್ಲಿಯೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಪಂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಯಾವುದೇ ಕ್ಷಣದಲ್ಲೂ ದಿನಾಂಕ ನಿಗದಿಪಡಿ
ಸಬಹುದು. ಹೀಗಾಗಿ, ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಎಲ್ಲ ರೀತಿಯಲ್ಲಿಯೂ ಸಿದ್ದವಾಗಿದ್ದಾರೆ ಎಂದು ತಿಳಿಸಿದರು.
ಚುನಾವಣೆಗೆ ನೂತನ ಕಾಯ್ದೆ  ರೂಪಿಸಲಾಗಿದ್ದು, ಅದರಂತೆ ಶೇ.50 ಮಹಿಳಾ ಮೀಸಲಾತಿ ದೊರಕಲಿದೆ. ಈ ಸಂಬಂಧ ಈಗಾಗಲೇ ತಿದ್ದುಪಡಿ ಪ್ರಕಾರ ಹೊಸ ಮೀಸಲು ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಜತೆಗೆ ಕೆಲವು ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದ್ದು, ಅದರ ಮಾಹಿತಿಯುಳ್ಳ ವಿವರವನ್ನು ಆಯೋಗಕ್ಕೆ ನೀಡಲಾಗಿದೆ ಎಂದು ಅವರು ತಿಳಿಸಿದರು.
6 ಪಥ ರಸ್ತೆಗೆ ಒಪ್ಪಿಗೆ: ಬೆಂಗಳೂರು- ಮೈಸೂರು ರಸ್ತೆಯನ್ನು 6 ಪಥವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಅದಷ್ಟು ಶೀಘ್ರವಾಗಿ
ಕಾಮಗಾರಿ ಆರಂಭಿಸಲಿದೆ. ಈ ಕುರಿತು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಮಾತುಕತೆ ನಡೆಸಲಾಗಿದೆ.
ರಾಮನಗರ, ಚನ್ನಪಟ್ಟಣ ಸೇರಿದಂತೆ ಪ್ರಮುಖ ಪಟ್ಟಣಗಳಲ್ಲಿ ಬೈ-ಪಾಸ್ ರಸ್ತೆ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಕೇಂದ್ರ ಸರ್ಕಾರದ ಜತೆಗೂಡಿ ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಗ್ರಾಪಂ ಚುನಾವಣೆ ಸಿದ್ಧತೆ ಕುರಿತಂತೆ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕರು, ಮುಖಂಡರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು. ಸಹಕಾರ ಮತ್ತು ಸಕ್ಕರೆ ಸಚಿವ ಎಚ್.ಎಸ್. ಮಹದೇವಪ್ರಸಾದ್, ಶಾಸಕರಾದ ಕೆ. ವೆಂಕಟೇಶ್, ಎಸ್. ಜಯಣ್ಣ, ಎಚ್.ಪಿ. ಮಂಜುನಾಥ್, ಆರ್. ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಆರ್. ಧರ್ಮಸೇನ, ಎಂಡಿಎ ಅಧ್ಯಕ್ಷ ಕೆ.ಆರ್. ಮೋಹನ್‍ಕುಮಾರ್, ಮಾಜಿ ಶಾಸಕ ಚಿಕ್ಕಣ್ಣ, ಜಿಪಂ ಉಪಾಧ್ಯಕ್ಷ ಎಲ್.
ಮಾದಪ್ಪ, ರಾಜ್ಯ ವಾಲ್ಮೀಕಿ ನಿಗಮದ ಅಧ್ಯಕ್ಷ ಎಚ್.ಸಿ. ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com