
ವಿಜಯಪುರ: ಪಟ್ಟಣ ಸಮೀಪದ ಯಲಿಯೂರು ಗ್ರಾಮದ ಜೆಡಿಎಸ್ ಮುಖಂಡ ಹಾಲು ಉತ್ಪಾದಕ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆನಂದ್ ಜೆಡಿಎಸ್ ತೊರೆದು, ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು.
ಯಲಿಯೂರು ಗ್ರಾಮದಲ್ಲಿ ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನಂದ್‍ರವರು ಕಾಂಗ್ರೆಸ್ ಬಾವುಟವನ್ನು ಸ್ವೀಕರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು.
ಗೊಡ್ಲುಮುದ್ದೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚೇತನ್ ಗೌಡ ಮಾತನಾಡಿ, ಈ ಬಾರಿ ಗ್ರಾಮಪಂಚಾಯ್ತಿ ಯಲ್ಲಿ ಅತಿ ಹೆಚ್ಚಿನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಜನತೆ ಸಹಕರಿಸಬೇಕೆಂದು ತಿಳಿಸಿದರು. ಮಾಜಿ ಶಾಸಕ ವೆಂಕಟಸ್ವಾಮಿ, ಲಕ್ಷ್ಮಿನಾರಾಯಣಪ್ಪ ಸೇರಿ ಅನೇಕರಿದ್ದರು.
Advertisement