
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟು ಸುಳ್ಳುಗಾರರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಟೀಕೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2003ರ ಮೇ 8ರಂದು ಕೆಂಗೇರಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸುಳ್ಳು ದಾಖಲೆ ಸಲ್ಲಿಸಿ ಆಸ್ತಿ ನೋಂದಣಿ ಮಾಡಿಸಿದ್ದಾರೆ. ಹೀಗಾಗಿ, ನಮ್ಮ ಕುಟುಂಬವನ್ನು ಸುಳ್ಳುಗಾರರ ಕುಟುಂಬ ಎಂದು ಹೇಳುವ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರು ಯಾವ ರೀತಿಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬುದರ ದಾಖಲೆಯೂನನಗೆಲಭಿಸಿದೆ. ಸಿದ್ದರಾಮಯ್ಯ ಅವರಿಗೆ ಧೈರ್ಯವಿದ್ದರೆ ತಾವು ನೀಡಿರುವ ಸುಳ್ಳು ಮಾಹಿತಿಯನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಲಾಟರಿ ಸರ್ಕಾರ: ಅಕ್ರಮ ಲಾಟರಿ ಹಗರಣದಲ್ಲಿ ಒಬ್ಬಿಬ್ಬರು ಸಚಿವರು ಮಾತ್ರ ರಾಜಿನಾಮೆ ನೀಡಬೇಕಿಲ್ಲ. ಇಡೀ ಸಚಿವ ಸಂಪುಟ, ಸರ್ಕಾರವೇ ರಾಜಿನಾಮೆ ನೀಡಬೇಕಾಗುತ್ತದೆ. ಈ ಹಗರಣಕ್ಕೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ನ ಪ್ರೇರಣೆ ಇದೆ. ಹೀಗಾಗಿಯೇ ಈ ವಿಚಾರದಲ್ಲಿ ಹೈಕಮಾಂಡ್ ಮೌನಕ್ಕೆ ಶರಣಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಲಾಟರಿ ಹಗರಣದಲ್ಲಿ ಭಾಗಿಯಾಗಿರುವ ಎಂಎಲ್ಸಿ ಯಾರು ಎಂದು ಪ್ರಶ್ನಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರ ಅಜೆಂಡಾ ಏನು ಎಂಬುದು ನನಗೆ ಗೊತ್ತಿದೆ. ಹೀಗಾಗಿ ಅವರ ಪ್ರಶ್ನೆಗೆ ಉತ್ತರಿಸುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆಯು ಸಿಬಿಐಗೆ ವಹಿಸಿರುವುದರಿಂದ ಯಾರಿಗೆ ದಾಖಲೆ ನೀಡಬೇಕು ಎಂಬುದು ನನಗೆ
ಗೊತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Advertisement