
ಬೆಂಗಳೂರು: ಲೋಕಾಯುಕ್ತ ಭಾಸ್ಕರರಾವ್ ಅವರು ಮನೆಗೆ ಹೋಗಲೇಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ವೈ.ಎಸ್.ವಿ.ದತ್ತ ಹೇಳಿದ್ದಾರೆ.
ಈ ಸಂಬಂಧ 37 ಶಾಸಕರ ಸಹಿ ಇರುವ ಪತ್ರದೊಂದಿಗೆ ಲೋಕಾಯುಕ್ತ ಪದಚ್ಯುತಿ ನಿರ್ಣಯವನ್ನು ಸ್ಪೀಕರ್ ಅವರಿಗೆ ಸಲ್ಲಿಸಿದ್ದೇವೆ. ಇದಕ್ಕೆ ಕಾಂಗ್ರೆಸ್ ಶಾಸಕರೂ ಸಹಿ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಭಾಸ್ಕರ್ ರಾವ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಸಹಿ ಸಂಗ್ರಹ ಮಾಡಿ ಸ್ಪೀಕರ್ ಅವರಿಗೆ ಸಲ್ಲಿಸಿದ್ದೇವೆ. ಈ ಬಗ್ಗೆ ಜೆಡಿಎಸ್ ಪ್ರತ್ಯೇಕ ಅರ್ಜಿ ಸಲ್ಲಿಸಿರುವುದರಿಂದ ಅಗತ್ಯ ಸಂಖ್ಯಾ ಬಲ ಲಭಿಸುತ್ತದೆ.
-ಜಗದೀಶ್ ಶೆಟ್ಟರ್ ಪ್ರತಿಪಕ್ಷ ನಾಯಕ
Advertisement