ಪಿಎಫ್ಐ, ಕೆಎಫ್ ಡಿ ನಿಷೇಧಕ್ಕೆ ಆಗ್ರಹ

ನಾನಾ ಗಲಭೆ ಪ್ರಕರಣಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ದಾಖಲಾಗಿದ್ದ ವಿವಿಧ ಪ್ರಕರಣ ಕೈಬಿಟ್ಟ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ಷೇಪ ಎತ್ತಿರುವ ಬಿಜೆಪಿ, ಕೂಡಲೇ ಪ್ರಕರಣದ ಪುನರ್ ವಿಮರ್ಶೆ ಮಾಡುವಂತೆ ಒತ್ತಾಯಿಸಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ವಿಧಾನಪರಿಷತ್ತು: ನಾನಾ ಗಲಭೆ ಪ್ರಕರಣಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ದಾಖಲಾಗಿದ್ದ ವಿವಿಧ ಪ್ರಕರಣ ಕೈಬಿಟ್ಟ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ಷೇಪ ಎತ್ತಿರುವ ಬಿಜೆಪಿ, ಕೂಡಲೇ ಪ್ರಕರಣದ ಪುನರ್ ವಿಮರ್ಶೆ ಮಾಡುವಂತೆ ಒತ್ತಾಯಿಸಿದೆ.

ಜೊತೆಗೆ ಪಿಎಫ್ಐ, ಕೆಎಫ್ ಡಿ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಒತ್ತಾಯಿಸಿದೆ. ಮೇಲ್ಮನೆಯಲ್ಲಿ ರಾಜ್ಯದ ಕಾನೂನು ವ್ಯವಸ್ಥೆ ಕುರಿತ ನಿಲುವಳಿ ಮೇಲೆ ಚರ್ಚೆಯಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯ ಅಶ್ವತ್ಥನಾರಾಯಣ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚಟುವಟಿಕೆಯ ಕುರಿತು ಮಾಹಿತಿ ನೀಡಿದರಲ್ಲದೇ, ನೆರೆಯ ಕೇರಳ ಸರ್ಕಾರ ಕೈಗೊಂಡ ನಿರ್ಧಾರವನ್ನು ಗೃಹ ಸಚಿವರಿಗೆ ಕೊಟ್ಟರು. ಗೃಹ ಸಚಿವರೂ ಅಶ್ವತ್ಥ ನಾರಾಯಣ ಅವರ ಮಾತನ್ನು ಗಂಭೀರವಾಗಿ ಆಲಿಸಿ, ದಾಖಲೆ ವೀಕ್ಷಿಸಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಣ್ಣೂರಿನಲ್ಲಿ ಉಗ್ರ ಚಟುವಟಿಕೆ ಜತೆ ಸಂಬಂಧ ಹೊಂದಿದೆ ಎಂಬ ಪೊಲೀಸ್ ವರದಿ ಆಧರಿಸಿ ಕೇರಳ ಸಿಎಂ ಆ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಅದೇ ಸಂಘಟನೆಯ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಸರ್ಕಾರ ಕೈಬಿಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಪಕ್ಷ ನಾಯಕ ಈಶ್ವರಪ್ಪ ಮಾತನಾಡಿ, ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳೇ ಕೇರಳದಿಂದ ಮಾರ ಕಾಸ್ತ್ರಗಳೊಂದಿಗೆ ಬಂದಿದ್ದ ತಂಡದ ಬಗ್ಗೆ ಮಾಹಿತಿ ನೀಡಿದ್ದರು. ಪಾಕಿಸ್ತಾನಕ್ಕೆ ಜೈ ಘೋಷಣೆ ಹಾಕಿದ ವಿಡಿಯೋವನ್ನೂ ಪೊಲೀಸರು ರೆಕಾರ್ಡ್ ಮಾಡಿದ್ದಾರೆ. ಸರ್ಕಾರ ಗಂಭೀರವಾಗಿ ಆಲೋಚಿಸುವ ಅಗತ್ಯವಿದೆ ಎಂದರು. ಒಂದು ಹಂತದಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ಅಶ್ವತ್ಥನಾರಾಯಣ, ಗಲಭೆ ನಡೆಸಿದ ಪಿಎಫ್ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸುತ್ತಾರೆ. ಆದರೆ, ಸರ್ಕಾರ ಅವರ ಮೇಲಿನ ಪ್ರಕರಣ ಕೈಬಿಟ್ಟರೆ, ಮುಂದಿನ ದಿನಗಳಲ್ಲಿ ಏಕೆ ಪೊಲೀಸರು ಹಿಡಿಯುತ್ತಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com