ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.

ಇಂದು ವಿಧಾನ ಪರಿಷತ್​ನಲ್ಲಿ ವಿಷಯ ಪ್ರಸ್ತಾಪಿಸಿದ ಈಶ್ವರಪ್ಪ ಅವರು, ಕಳೆದ ಒಂದು ವಾರದಲ್ಲಿ ಎರಡು ಸಲ ನನಗೆ ಜೀವ ಬೆದರಿಕೆ ಕರೆ ಬಂದಿದ್ದು, ವಿದೇಶದಿಂದ ಕರೆ ಮಾಡಿದ್ದ ವ್ಯಕ್ತಿ, ಉರ್ದು ಮಿಶ್ರಿತ ಕನ್ನಡ ಭಾಷೆಯಲ್ಲಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದರು.

ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ  ನನಗೆ ಸೂಕ್ತ ಭದ್ರತೆ ನೀಡಬೇಕು ಎಂದು ಸದನದಲ್ಲಿ ಮನವಿ ಮಾಡಿದ ಈಶ್ವರಪ್ಪ, ಮಂತ್ರಿಗಳು, ಉದ್ಯಮಿಗಳಿಗೆ ಬೆದರಿಕೆ ಹಾಕುವುದು ಹೆಚ್ಚಾಗಿದೆ. ಹಾಗಾಗಿ ಗೃಹ ಇಲಾಖೆ ಕ್ರಮ ಕೈಗೊಳ್ಳಬೇಕು ಮತ್ತು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಒಂದು ವಾರದಲ್ಲಿ ಎರಡು ಸಲ ಜೀವ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರೊಂದಿಗೆ ಚರ್ಚಿಸಿ, ಇಂದು ಸಂಜೆ ಪೊಲೀಸರಿಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.

ಟಿಪ್ಪು ಜಂಯತಿ ಆಚರಣೆ ಕುರಿತು ಈಶ್ವರಪ್ಪ ನೀಡಿದ ಹೇಳಿಕೆಗಳು ಇದಕ್ಕೆ ಕಾರಣ ಎನ್ನಲಾಗಿದೆ. ಕೇರಳದ ರಾಷ್ಟ್ರ ದ್ರೋಹಿ ಮುಸ್ಲಿಂರು ನಮ್ಮ ರಾಜ್ಯಕ್ಕೆ ಬಂದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ಹಿಂದೂ ಗಳನ್ನು ಕೊಲೆ ಮಾಡುತ್ತಿದ್ದಾರೆ ಎಂಬ ವಿವಾದತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com